ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ನಾವು ಜೆಡಿಎಸ್ ಜೊತೆ ಲಿಖಿತ ಒಪ್ಪಂದ ಮಾಡಿಕೊಂಡಿದ್ದೇವೆ, ಈ ಸರ್ಕಾರ 5 ವರ್ಷ ಪೂರೈಸಲಿದೆ; ದಿನೇಶ್ ಗುಂಡೂರಾವ್

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಎದ್ದಿರುವ ಸಂಶಯಗಳನ್ನು ...

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಎದ್ದಿರುವ ಸಂಶಯಗಳನ್ನು ಶಮನಗೊಳಿಸಲು ಕಾಂಗ್ರೆಸ್ ನಾಯಕರು ಯತ್ನ ನಡೆಸುತ್ತಿದ್ದು ಜೆಡಿಎಸ್ ನಾಯಕರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಸಂಪೂರ್ಣ 5 ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸಲಿದೆ ಎಂಬ ಭರವಸೆ ಮಾತುಗಳನ್ನು ಆಡುತ್ತಿದ್ದಾರೆ.

ಈ ಬಗ್ಗೆ ನಿನ್ನೆ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕುಮಾರಸ್ವಾಮಿ ನೇತೃತ್ವದ ಸರ್ಕಾರ 5 ವರ್ಷಗಳ ಕಾಲ ಸಂಪೂರ್ಣವಾಗಿ ಆಡಳಿತ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ನಾವು ಜೆಡಿಎಸ್ ಜೊತೆ ಲಿಖಿತ ಒಪ್ಪಂದ ಮಾಡಿಕೊಂಡಿದ್ದು,ಕೊಟ್ಟ ಮಾತಿಗೆ ನಾವು ತಪ್ಪುವುದಿಲ್ಲ, ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದ ಅಸ್ಥಿರತೆ ಬಗ್ಗೆ ಯಾವುದೇ ಸಂಶಯ, ಸಂದೇಹಗಳು ಮೂಡದಂತೆ ಮೈತ್ರಿಯನ್ನು ಸುಭದ್ರಗೊಳಿಸುವ ಪ್ರಯತ್ನವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕೂಡ ಮಾಡಿದ್ದಾರೆ. ಸರ್ಕಾರ ಭದ್ರವಾಗಿದ್ದು ಈ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.

ಶ್ರಾವಣ ಮಾಸ ಮುಗಿದ ನಂತರ ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಏನಾಗುತ್ತದೆ ನೋಡೋಣ, ಶ್ರಾವಣ ಮಾಸ ಮುಗಿದ ಮೇಲೆ ಭಾದ್ರಪದ ಮಾಸ ಬರುತ್ತದೆ ನಂತರ ಕಾರ್ತಿಕ ಮಾಸ ಕೂಡ ಬರುತ್ತದೆ ಎಂದರು.

ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಆರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದರೂ ಕೂಡ ನಿನ್ನೆ ಅವರ ಮಾತಿನ ಶೈಲಿ ಬದಲಾಗಿತ್ತು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ. ಸ್ಥಳೀಯ ಮಟ್ಟದಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಸಹ ಅದನ್ನು ಬಗೆಹರಿಸಿಕೊಳ್ಳಲಾಗುವುದು ಎಂದು ಸಿಎಂ ಕುಮಾರಸ್ವಾಮಿ ನಿನ್ನೆ ಮೈಸೂರಿನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಕುಮಾರಸ್ವಾಮಿ ಸರ್ಕಾರ ಮುರಿದು ಬೀಳುತ್ತದೆ ಎಂದು ಬಿಜೆಪಿ ಪ್ರಚಾರ ಮಾಡುತ್ತಿದೆ. ಆಂತರಿಕ ಭಿನ್ನಾಭಿಪ್ರಾಯಗಳಿಂದ ಮೈತ್ರಿ ಸರಕಾರ ಇನ್ನು 15 ದಿನಗಳಲ್ಲಿ ಬಿದ್ದು ಹೋಗುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ ನಂತರ ಮತ್ತೊಬ್ಬ ಸಚಿವ ಸದಾನಂದ ಗೌಡ ಸಹ ಮಂಗಳೂರಿನಲ್ಲಿ ನಿನ್ನೆ ಇದೇ ರೀತಿಯ ಮಾತುಗಳನ್ನಾಡಿದ್ದಾರೆ.

ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿಯವರು ಒಟ್ಟಿಗೆ ಹೊಂದಾಣಿಕೆಯಿಂದ ಕೆಲಸ ಮಾಡಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ನ ಒತ್ತಡದಿಂದಾಗಿ ಒಲ್ಲದ ಮನಸ್ಸಿನಿಂದ ಸಿದ್ದರಾಮಯ್ಯ ಜೆಡಿಎಸ್ ಜೊತೆ ಕೈಜೋಡಿಸಿದ್ದಾರೆ. ಈ ಮೈತ್ರಿ ಸರ್ಕಾರ ಇನ್ನು 15 ದಿನಗಳು ಅಥವಾ ಒಂದು ತಿಂಗಳಲ್ಲಿ ಮುರಿದು ಬೀಳಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!