ಸಮ್ಮಿಶ್ರ ಸರ್ಕಾರಕ್ಕೆ 100 ದಿನ: ಸಂಭ್ರಮದ ಆಚೆಗಿದೆ ನೂರಾರು ಸವಾಲುಗಳು! 
ರಾಜಕೀಯ

ಸಮ್ಮಿಶ್ರ ಸರ್ಕಾರಕ್ಕೆ 100 ದಿನ: ಸಂಭ್ರಮದ ಆಚೆಗಿದೆ ನೂರಾರು ಸವಾಲುಗಳು!

ಕರ್ನಾಟಕದ ಜೆಡಿಯು (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರಕಾರವು ಗುರುವಾರ 100 ದಿನಗಳನ್ನು ಪೂರ್ಣಗೊಳಿಸುತ್ತಿದೆ.

ಬೆಂಗಳೂರು: ಕರ್ನಾಟಕದ ಜೆಡಿಯು (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರಕಾರವು ಗುರುವಾರ 100 ದಿನಗಳನ್ನು ಪೂರ್ಣಗೊಳಿಸುತ್ತಿದೆ. ಆದರೆ ಇದೇ ವೇಳೆ ಪ್ರಮಾಣವಚನ ಸಮಾರಂಭ, ಎರಡು ಸಮನ್ವಯ ಸಮಿತಿ ಸಭೆಗಳು, 27 ಕ್ಯಾಬಿನೆಟ್ ಮಂತ್ರಿಗಳು ಮತ್ತು ಒಂದು ಶಾಸನಸಭೆಯ ಅಧಿವೇಶನ ನಂತರ, ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಸವಾಲುಗಳು ಇನ್ನೂ ಹೆಚ್ಚಿವೆ.
ಸಮನ್ವಯ ಸಮಿತಿಯ ಉಪ-ಸಮಿತಿಯು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಜನಸಾಮಾನ್ಯರಿಗೆ ಇನ್ನೂ ತಲುಪಿಸಬೇಕಿದೆ. .ಇದರ ನಡುವೆ ಸರ್ಕಾರ ಬೀಳಿಸಲು ವಿರೋಧಿ ಶಕ್ತಿಗಳು ಹವಣಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ದೂರಿದ್ದಾರೆ. ಇದೇ ವೇಳೆ ಹಲವು ಬಾರಿ ಪತ್ರ ಮುಖೇನ ಬೇಡಿಕೆಗಳನ್ನಿಡುತ್ತಾ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯಿಂಡ ಸರ್ಕಾರಕ್ಕೆ ಇನ್ನಷ್ಟು ಸಂಕಷ್ಟ ಎದುರಾಗಿದೆ.
ಜೆಡಿಯು (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಡು ಸರ್ಕಾರ ಪ್ರತಿಪಾದಿಸುತ್ತಾ ಬರುತ್ತಿದೆ. ಕುಮಾರಸ್ವಾಮಿಯವರಿಗೆ ಮಾತ್ರ ಸವಾಲುಗಳು ಎದುರಾಗುತ್ತಲೇ ಇದೆ. ಸರ್ಕಾರವು ಸುರಕ್ಷಿತವಾಗಿದೆ ಮತ್ತು ಯಾವುದೇ ಗೊಂದಲಗಳಿಲ್ಲ. ಕೆಲವು ಜನರು, ವಿರೋಧ ಮತ್ತು ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಸಮಸ್ಯೆಗಳೇನೇ ಇರಲಿ, ನಾವೇ ಅದನ್ನು ಬಗೆಹರಿಸಿಕೊಳ್ಳಲಿದ್ದೇವೆ"ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಆದರೆ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮದ ಬಗೆಗೆ ಕೇಳಿದಾಗ ಮೌನ ತಾಳಿದ್ದಾರೆ.
ಮುಖ್ಯಮಂತ್ರಿಯು ತನ್ನ ಸರಕಾರ ಸರಾಗವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರೆ, ಅಧಿಕಾರಿಗಳ 'ವಿವೇಚನಾರಹಿತ' ವರ್ಗಾವಣೆ ಮಂತ್ರಿಗಳಿಗೆ ಕಿರಿಕಿರಿ ಉಂಟುಮಾಡಿದೆ. "ಅಧಿಕಾರಿಗಳು ವರ್ಗಾವಣೆಯ ವಿಚಾರದಲ್ಲಿ ಸಮನ್ವಯದ ಕೊರತೆ ಇದೆ.ಲಾಖೆಯ ಸಚಿವರೊಂದಿಗೆ ಸಮಾಲೋಚನೆಯಿಲ್ಲ "ಎಂದು ಸರ್ಕಾರದ ಹಿರಿಯ ಸಚಿವರು ಎಕ್ಸ್ ಪ್ರೆಸ್ ಗೆ ಹೇಳಿದ್ದಾರೆ.ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಇದನ್ನು ನಿರಾಕರಿಸಿದ್ದಾರೆ.
ಇದೆಲ್ಲದರ ನಡುವೆ ಭೀಕರ ಪ್ರವಾಹ ರಾಜ್ಯದ ಏಳು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಹಾನಿ ಮಾಡಿದೆ.ಇನ್ನೊಂದೆಡೆ 16 ಜಿಲ್ಲೆಗಳು ಬರಗಾಲವನ್ನು ಅನುಭವಿಸುತ್ತಿದೆ.ಇಫ಼್ದೆಲ್ಲದರ ನಡುವೆ ರೈತರ ಸಾಲ ಮನ್ನಾ ಕುರಿತಂತೆ ಗಮನ ಕೇಂದ್ರೀಕರಿಸುವ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಈಗ ಪ್ರವಾಹ ಪೀಡಿತ ಜಿಲ್ಲೆಗಳ ಪರಿಹಾರ ಮತ್ತು ಪುನರ್ವಸತಿಗೆ ಹೆಚ್ಚಿನ ಆದ್ಯತೆ ನಿಡಬೇಕಾಗಿದೆ. 
ಸಿದ್ದರಾಮಯ್ಯ ಅವರ ಮುಂಬರುವ ವಿದೇಶಿ ಪ್ರವಾಸವು  ಸಮ್ಮಿಶ್ರ ಸರ್ಕಾರದ ಮೇಲೆ ಯಾವ ಪರಿಣಾಮ ಬೀರಲಿದೆ ಎನ್ನುವುದು ಕಾದು ನೋಡಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಬಿನೆಟ್ ಸಚಿವರಾದ ಕೆ ಜೆ ಜಾರ್ಜ್ ಮತ್ತು ಆರ್.ವಿ.ದೇಶಪಾಂಡೆ ಅವರೊಂದಿಗೆ ಯೂರೋಪ್ ಗೆ ಭೇಟಿ ನೀಡಲಿದ್ದಾರೆ. ಸಚಿವಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ಬೃಹತ್ ಕೃಷಿ ಸಾಲ ಮನ್ನಾ ಮಾಡುವುದು ಸಮ್ಮಿಶ್ರ ಸರ್ಕ್ಲಾರದ ಮುಂದಿರುವ ದೊಡ್ಡ ಸವಾಲಾಗಿದೆ.
ಇನ್ನು ಉತ್ತರ ಕರ್ನಾಟಕ ವಿರೋಧಿ ಧೋರಣೆ ಇದೆ ಎನ್ನುವ ಮಾತುಗಳ ನಡುವೆಯೂ ಕುಮಾರಸ್ವಾಮಿ ಬಗೆಗೆ ಕಳೆದ ಮೂರು ತಿಂಗಳಲ್ಲ್ಲಿ ಇದ್ದ ಗ್ರಹಿಕೆ ಬದಲಾಗಿದೆ.ಎಂದು ಹೇಳಲಾಗುತ್ತಿದೆ.ಆದರೆ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಎಂದು ವಿರೋಧಿಗಳು ಹೇಳುತ್ತಿದ್ದಾರೆ. "ಸರ್ಕಾರದ ಪಾಲುದಾರ ಪಕ್ಷಗಳ ನಾಯಕರಲ್ಲಿ ಪರಸ್ಪರ ನಂಬಿಕೆ ಇಲ್ಲ. ಈ ಸರ್ಕಾರವು 100 ದಿನಗಳ ಕಾಲ ಅಧಿಕಾರದಲ್ಲಿದೆಯಾದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜನರು ನಿರಾಶರಾಗಿದ್ದಾರೆ" ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT