ಸಾಂದರ್ಭಿಕ ಚಿತ್ರ 
ರಾಜಕೀಯ

ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ

ರಾಜ್ಯದ 22 ಜಿಲ್ಲೆಗಳ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೆ ಮತದಾರರು...

ಬೆಂಗಳೂರು: ರಾಜ್ಯದ 22 ಜಿಲ್ಲೆಗಳ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೆ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಬಹುದು.

ಶಾಂತಿಯುತ ಮತದಾನಕ್ಕಾಗಿ ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಈ ಎಲೆಕ್ಷನ್ ನಡೆಯುತ್ತಿದೆ.ಒಟ್ಟು 2634 ವಾರ್ಡ್‍ಗಳಲ್ಲಿ ಕಣಕ್ಕೆ ಇಳಿದಿದ್ದಾರೆ.

9,121 ಅಭ್ಯರ್ಥಿಗಳಿದ್ದು, ಈ ಪೈಕಿ ನಗರಸಭೆಯ 12, ಪುರಸಭೆಯ 17 ವಾರ್ಡ್‍ಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ. ಲೋಕಸಮರಕ್ಕೆ ಮುನ್ನ 49 ಲಕ್ಷ ಮತದಾರರು ಲೋಕಲ್ ಭವಿಷ್ಯ ಬರೆಯಲಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಈ ಚುನಾವಣೆ ಇಲ್ಲ.ಒಟ್ಟು 212 ನಗರ ಸಂಸ್ಥೆಗಳ ಪೈಕಿ 105 ಸಂಸ್ಥೆಗಳಿಗೆ ಮತದಾನವಾಗುತ್ತಿದೆ. ಇದರಲ್ಲಿ ಮೈಸೂರು, ಶಿವಮೊಗ್ಗ ಹಾಗೂ ತುಮಕೂರು  ಮಹಾನಗರ ಪಾಲಿಕೆ, 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿ ಸಂಸ್ಥೆಗಳ ಅಧಿಕಾರ ಗದ್ದುಗೆಗೆ ತೀವ್ರ ಸ್ಪರ್ಧೆ ನಡೆದಿದೆ.

ಅಫಜಲಪುರ ಪುರಸಭೆಯ 19ನೇ ವಾರ್ಡ್‍ನಲ್ಲಿ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರ ತಿರಸ್ಕೃತಗೊಂಡಿದೆ. ಕೊಳ್ಳೆಗಾಲ ನಗರಸಭೆಯ 9ನೇ ವಾರ್ಡ್‍ನಲ್ಲಿ ಬಿಎಸ್‍ಪಿ ಅಭ್ಯರ್ಥಿ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡಲಾಗಿದ್ದು, ಸೆಪ್ಟೆಂಬರ್ 3ರಂದು ದೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮೊದಲ ಬಾರಿಗೆ "ನೋಟಾ' ಬಳಕೆ:
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ "ನೋಟಾ' ಬಳಸಲಾಗುತ್ತಿದೆ. ಆದರೆ, ವಿವಿಪ್ಯಾಟ್‌ ಬಳಸಲಾಗುತ್ತಿಲ್ಲ. ಮತದಾರರಿಗೆ ಅವರ ಭಾವಚಿತ್ರವಿರುವ ಚೀಟಿ ವಿತರಿಸಲಾಗಿದೆ. ಮತದಾರರಿಗೆ ಎಡಗೈ ಉಂಗುರ ಬೆರಳಿಗೆ ಶಾಯಿ ಹಾಕಲಾಗುತ್ತಿದೆ. ಆದರೆ, ದಕ್ಷಿಣ ಕನ್ನಡ, ಹಾಸನ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬೇರೆ ಚುನಾವಣೆಗಳು ಈಗಷ್ಟೇ ನಡೆದಿರುವುದರಿಂದ ವಿನಾಯ್ತಿ ನೀಡಲಾಗಿದೆ. ಅದರಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಗೈ ಹೆಬ್ಬೆರಳು, ಹಾಸನ ಜಿಲ್ಲೆಯಲ್ಲಿ ಎಡಗೈ ಕಿರುಬೆರಳು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಲು ಸೂಚಿಸಲಾಗಿದೆ. ಭದ್ರತೆಗಾಗಿ ಪೊಲೀಸರು ಸೇರಿ ಒಟ್ಟು 36ರಿಂದ 40 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!