ಬರೀ ಸದ್ದು ಮಾಡೋದಷ್ಟೆ ಬಿಜೆಪಿ ಕೆಲಸ: ಜಾವಡೇಕರ್ ಹೇಳಿಕೆಗೆ ಸಿಎಂ ತಿರುಗೇಟು; ಸರ್ಕಾರ ಗಟ್ಟಿ ಎಂದ ಡಿಕೆಶಿ
ಕರ್ನಾಟಕ ರಾಜಕೀಯದಲ್ಲಿ ಡಿಸೆಂಬರ್ನಲ್ಲಿ ಧಮಾಕಾ ಆಗಲಿದೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕೆಲವು ಸಚಿವರು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಡಿಸೆಂಬರ್ನಲ್ಲಿ ಧಮಾಕಾ ಆಗಲಿದೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕೆಲವು ಸಚಿವರು ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಜನ ಬಿಜೆಪಿ ಸರ್ಕಾರವನ್ನು ಅಪೇಕ್ಷೆ ಪಡುತ್ತಿದ್ದಾರೆ. ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡಿದ್ದಾರೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದರು. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಆರು ತಿಂಗಳಿಂದ ಬಿಜೆಪಿಯವರು ಇದನ್ನೇ ಹೇಳುತ್ತಿದ್ದಾರೆ. ಬರೀ ಸದ್ದು ಮಾಡೋದಷ್ಟೇ. ಸರ್ಕಾರ ಕಲ್ಲುಬಂಡೆಯ ಹಾಗೇ ಇದೆ. ಆ ವಿಷಯ ಸತ್ತು ಹೋಗಿದೆ ಎಂದಿದ್ದಾರೆ.
ಪ್ರಕಾಶ್ ಜಾವಡೇಕರ್ ಹೇಳಿಕೆ ಬಗ್ಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರ ಗಟ್ಟಿಯಾಗಿರುತ್ತದೆ. ನಮ್ಮದೆ ಇಲ್ಲದೆ ಆಪರೇಶನ್ ಕಮಲ ಮಾಡಿದ್ದಾರೆ. ನಾವು ಅವರಷ್ಟು ಬುದ್ಧಿವಂತರು ಅಲ್ಲದೆ ಇರಬಹುದು. ಆದರೆ ಅವರಿಂತ ನಾವು 1% ಹೆಚ್ಚು ಯೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಚಿವರಾದ ಆರ್. ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಸಾರಾ ಮಹೇಶ್ ಕೂಡಾ ಪ್ರಕಾಶ್ ಜಾವಡೇಕರ್ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.