ಡಿ.ಕೆ ಶಿವಕುಮಾರ್ 
ರಾಜಕೀಯ

ರೇವಂತ್ ರೆಡ್ಡಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ ಶಿವಕುಮಾರ್

ತೆಲಂಗಾಣದ ಕಾಂಗ್ರೆಸ್ ಕಾರ್ಯಾಧ್ಯಕ್ಷ ರೇವಂತ್ ರೆಡ್ಡಿ ಅವರ ಬಂಧನವನ್ನು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರು: ತೆಲಂಗಾಣದ ಕಾಂಗ್ರೆಸ್ ಕಾರ್ಯಾಧ್ಯಕ್ಷ ರೇವಂತ್ ರೆಡ್ಡಿ ಅವರ ಬಂಧನವನ್ನು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೆಳಗಿನ ಜಾವ 3 ಗಂಟೆಗೆ ತೆಲಂಗಾಣದಲ್ಲಿ  ನಮ್ಮ ಪಕ್ಷದ ರೇವಂತ್ ರೆಡ್ಡಿಯವರನ್ನ ಅರೆಸ್ಟ್ ಮಾಡಲಾಗಿದೆ.  ರೇವಂತ್ ಬಂಧನದ ಬಗ್ಗೆ ಅವರ ಪತ್ನಿ ಗೀತಾರಿಂದ ತಿಳಿಯಿತು.  500ಕ್ಕೂ ಅಧಿಕ ಸಂಖ್ಯೆಯಲ್ಲಿ ಪೊಲೀಸರು ಮನೆಗೆ ನುಗ್ಗಿ ಬಂಧಿಸಿದ್ದು, ಈ ಕ್ರಮವನ್ನು ತಾವು ಖಂಡಿಸುವುದಾಗಿ ಹೇಳಿದ್ದಾರೆ. 
ಮುಖ್ಯಮಂತ್ರಿ ಕೆಸಿಆರ್ ಅವರ ಪ್ರಚಾರ ಸಭೆ ಇದೆ ಎಂಬ ಕಾರಣಕ್ಕೆ ರೇವಂತ್ ರೆಡ್ಡಿ ಅವರನ್ನು ಬೆಳಗ್ಗಿನ ಜಾವ 3 ಗಂಟೆಯ ಹೊತ್ತಿಗೆ ಬಂಧಿಸಿದ್ದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದ ಅವರು ಈ ಕುರಿತು ನಾವು ಚುನಾವಣಾ ಆಯೋಗದ ಮೊರೆಹೋಗುತ್ತೇವೆ  ಎಂದು ಹೇಳಿದ್ದಾರೆ.
ಮನೆಯ ಗೇಟ್ ಮುರಿದು ಏಕಾಏಕಿ ನುಗ್ಗಿ ಬಂಧಿಸಿ, ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ.  ಈ ರೀತಿ ನಡೆದುಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ಈ ಕೃತ್ಯದ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಕೈವಾಡ ಇದೆ. ಈ ರೀತಿ ನಡೆದುಕೊಂಡು ಅವರೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ತೆಲಗಾಣದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!