ಬಸವರಾಜ್ ಹೊರಟ್ಟಿ 
ರಾಜಕೀಯ

ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ

ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ....

ಬೆಳಗಾವಿ: ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾದ ನಂತರ ಪರಿಷತ್​ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಾವೇ ಸಭಾಪತಿಯಾಗುತ್ತೇವೆ ಎಂಬ ನಂಬಿಕೆಯಲ್ಲಿದ್ದರು. ಆದರೆ, ಆ ಸ್ಥಾನ ಸಿಗದಿದ್ದರಿಂದ ತೀವ್ರ ನಿರಾಸೆಗೊಂಡ ಹೊರಟ್ಟಿ ಅವರು ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದು ಸಿಎಂ ಎಚ್ ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು 'ಎಚ್‌ಡಿಕೆ ಅವರು ಮುಖ್ಯಮಂತ್ರಿಯಾಗಿರುವುದು ಮೈತ್ರಿ ಧರ್ಮ ಪಾಲಿಸುವುದಕ್ಕೆ. ಮೈತ್ರಿ ಪಕ್ಷ ಕಾಂಗ್ರೆಸ್ ನಲ್ಲಿ ಒಗ್ಗಟ್ಟಿಲ್ಲ. ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ವರ್ತನೆ ಪ್ರಶ್ನಿಸುವಂತೆ ವರಿಷ್ಠರಿಗೆ ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ. 
ಪ್ರಮುಖ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿದಂತೆ ನಡೆದರೆ, ಇದೇ ತರ ಮುಂದುವರಿದರೆ ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಚ್‌ಡಿಕೆ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ. 
ಸಚಿವ ಸ್ಥಾನ ಸಿಗದ ಹತಾಶೆಯಲ್ಲಿದ್ದ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೊಡಿಸುವುದಾಗಿ ಜೆಡಿಎಸ್ ವರಿಷ್ಠರು ಸಮಾಧಾನ ಮಾಡಿದ್ದರು. ಆದರೆ ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT