ಬರ ಪರಿಹಾರ ನಿರ್ವಹಣೆಯಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ 
ರಾಜಕೀಯ

ಬರ ಪರಿಹಾರ ನಿರ್ವಹಣೆಯಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

ಬರ ಪರಿಹಾರಕ್ಕೆಂದು ನೀಡಲಾಗುತ್ತಿರುವ ರೂ.50 ಲಕ್ಷ ಯಾವುದಕ್ಕೂ ಸಾಲುತ್ತಿಲ್ಲ. ಕೂಡಲೇ ಮೊತ್ತ ಹೆಚ್ಚಿಸಬೇಕು. ಜೊತೆಗೆ ಬರ ನಿರ್ವಹಣೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆಂದು ಪ್ರತಿಪಕ್ಷ ಬಿಜೆಪಿ, ರಾಜ್ಯ ಸರ್ಕಾರವನ್ನು...

ಬೆಳಗಾವಿ: ಬರ ಪರಿಹಾರಕ್ಕೆಂದು ನೀಡಲಾಗುತ್ತಿರುವ ರೂ.50 ಲಕ್ಷ ಯಾವುದಕ್ಕೂ ಸಾಲುತ್ತಿಲ್ಲ. ಕೂಡಲೇ ಮೊತ್ತ ಹೆಚ್ಚಿಸಬೇಕು. ಜೊತೆಗೆ ಬರ ನಿರ್ವಹಣೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆಂದು ಪ್ರತಿಪಕ್ಷ ಬಿಜೆಪಿ, ರಾಜ್ಯ ಸರ್ಕಾರವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. 
ಬರ ಪರಿಸ್ಥಿತಿ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ಪಿ.ರಾಜೀವ್, ಸರ್ಕಾರ ಸಾಲದ ಶೂಲದಲ್ಲಿ ಸಿಲುಕಿದೆ. ರೈತರು ಪ್ರಾಣಿಗಳು ಸೇರಿದಂತೆ ಜೀವಜಂತುಗಳು ಬರದಿಂದ ನಲುಗುತ್ತಿದ್ದು, ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಬರದ ಕುರಿತು ಅಧ್ಯಯನ ನಡೆಸಲು ಜಿಲ್ಲಾಧಿಕಾರಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ತಹಶೀಲ್ದಾರರು, ಕೃಷಿ ವಿವಿಗಳ ವಿಜ್ಞಾನಿಗಳು ಹಳ್ಳಿಗಳಿಗೆ ಹೋಗಿ ಮಲಗಬೇಕು. 
ಅವರಿಗೆ ಅಧ್ಯಯನ ನಡೆಸಲು ಸರ್ಕಾರ ಸೂಚನೆ ಕೊಡಬೇಕು ಎಂದು ಆಗ್ರಹಿಸಿದರು. ರಾಯಭಾಗ ತಾಲೂಕಿನಲ್ಲಿ ಶೇ.98ರಷ್ಟು ಮಳೆಕೊರತೆಯಿಂದ ಬಿತ್ತನೆ ಶೇ.75ರಷ್ಟು ಆಗಿಲ್ಲ. ಆದರೆ, ಪರಿಹಾರ ಒದಗಿಸಬೇಕಾದ ಸರ್ಕಾರ ಸತ್ತ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್