ಬೆಂಗಳೂರು: ರಾಫೆಲ್ ಹಗರಣ ಸಂಬಂಧ ಸುಪ್ರೀಂಕೋರ್ಟ್ ಪ್ರಧಾನಿ ನರೇಂದ್ರಮೋದಿ ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ್ದರೂ ಅದನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಬಿಜೆಪಿ ಅಂಬಾನಿ ಪರವಾಗಿದೆ ಎನ್ನುವ ಕಾಂಗ್ರೆಸ್ ಮಾಮಾ ಸಂಸ್ಕೃತಿಗೆ ಹೆಸರುವಾಸಿಯಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಾಮಾ ಸಂಸ್ಕೃತಿಯನ್ನು ಬಳಸಿಕೊಳ್ಳಲಾಗಿತ್ತು. ಕಾಂಗ್ರೆಸ್ ಪಕ್ಷದ ಮಾಮಾ ಕ್ರಿಶ್ಚಿಯನ್ ಮೈಕೆಲ್ ಅವರನ್ನು ಆಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿ ಭಾರತಕ್ಕೆ ತರಲಾಗಿದೆ. ಬೋಪೋರ್ಸ್ ಹಗರಣದಲ್ಲಿ ಕ್ವಟ್ರೋಚಿ ಮಾಮಾ ಯಾವ ರೀತಿಯ ಪಾತ್ರ ನಿರ್ವಹಿಸಿದ್ದರು ಎಂಬುದು ಗೊತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ವ್ಯವಹಾರಕ್ಕಾಗಿ ಮಧ್ಯವರ್ತಿಗಳು, ದಲ್ಲಾಳ್ಳಿಗಳನ್ನು ಬಳಸಿಕೊಳ್ಳುತಿತ್ತು. ಆದರೆ, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಷ್ಟ್ರದ ಭದ್ರತೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಸಂಬೀತ್ ಪಾತ್ರ ಹೇಳಿದರು.