ರಾಜಕೀಯ

ರಫೇಲ್ ವಿವಾದ: ರಾಹುಲ್ ಕ್ಷಮೆಯಾಚಿಸಲಿ; ಬಿಜೆಪಿ ಆಗ್ರಹ

ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ...

ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ ನಡೆಸಿತು. 
ನಗರದ ಆನಂದ್ ರಾವ್ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಬಳಿ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಬಿಜೆಪಿಯ ಸ್ವಚ್ಛವಾದ ಆಡಲಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೋದಿಯವರು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲಿಯೂ ಮನ್ನಣೆ ಪಡೆದಿದ್ದಾರೆಂದು ಹೇಳಿದ್ದಾರೆ. 
ರಾಹುಲ್ ಗಾಂಧಿಯವರು ದಾಖಲೆಗಳಿಲ್ಲದೆ ವಿನಾಕಾರಣ ಆರೋಪ ಮಾಡಿದ್ದಾರೆ. ಇದು ನಿಜವಾಗಿದ್ದರೆ ಅವರು ಸದನದಲ್ಲಿ ದಾಖಲೆಗಳನ್ನು ಇಟ್ಟು ಚರ್ಚೆ ನಡೆಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಬೀದಿಯಲ್ಲಿ ನಿಂತು ಮಾತನಾಡಬಾರದು ಎಂದು ತಿಳಿಸಿದ್ದಾರೆ. 
ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ವಿಫಲ ಯತ್ನ ನಡೆಸಿದರು. ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಬಿಜೆಪಿ ನಗರಾಧ್ಯಕ್ಷ ಸದಾಶಿವ, ಖಜಾಂಚಿ ಸುಬ್ಬ ನರಸಿಂಹ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ