ಸಿದ್ದರಾಮಯ್ಯ ಮತ್ತು ರಮೇಶ್ ಜಾರಕಿಹೊಳಿ 
ರಾಜಕೀಯ

ಸಚಿವ ಜಾರಕಿಹೊಳಿಗೆ ಸಿದ್ದರಾಮಯ್ಯ ಕ್ಲಾಸ್: ಬಿಜೆಪಿಯಿಂದ ದೂರ ಇರುವಂತೆ ಸೂಚನೆ

ಬಿಜೆಪಿ ನಾಯಕರ ಔತಣಕೂಟದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು ಎಂದು ವರದಿಗಳು ತಿಳಿಸಿವೆ...

ಬೆಂಗಳೂರು: ಬಿಜೆಪಿ ನಾಯಕರ ಔತಣಕೂಟದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. 
ಗುರುವಾರ ನಗರದಲ್ಲಿ ಸಕ್ರಿಟ್ ಹೌಸ್ ನಲ್ಲಿ ಜಾರಕಿಹೊಳಿಯವರನ್ನು ಕರೆಸಿಕೊಂಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಳ್ಳದಂತೆ ಮತ್ತು ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಇದರ ಜೊತೆಗೆ ಸಚಿವ ಡಿ.ಕೆ.ಶಿವಕುಮಾರ್ ಅವರ ಔತಣ ಕೂಟದಿಂದ ದೂರ ಉಳಿದು, ಬಿಜೆಪಿ ಎಂಎಲ್'ಸಿ ಮಹಾಂತೇಶ ಕವಟಗಿಮಠ ಅವರ ಔತಣಕೂಟಕ್ಕೆ ಹಾಜರಾಗಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದಾಗಿ ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ