ಬೆಂಗಳೂರು: ಸಚಿವ ಸಂಪುಟದಿಂದ ಕೈಬಿಟ್ಟಿದ್ದೇ ಆದರೆ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್'ಗೆ ಅರಣ್ಯ ಸಚಿವ ಆರ್.ಶಂಕರ್ ಅವರು ಎಚ್ಚರಿಸಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು, ಬಿಜೆಪಿಯೊಂದಿಗೆ ಈ ವರೆಗೂ ನಾನು ಮಾತುಕತೆ ನಡೆಸಿಲ್ಲ. ಒಂದು ವೇಳೆ ಸಚಿವ ಸಂಪುಟದಿಂದ ನನ್ನನ್ನು ಕೈಬಿಟ್ಟಿದ್ದೇ ಆದರೆ, ಬಿಜೆಪಿ ಸೇರಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ಸಂಪುಟದಿಂದ ನನ್ನನ್ನು ಕೈಬಿಟ್ಟಿದ್ದಾರೆಂಬ ಮಾಹಿತಿಗಳು ನನಗೆ ಲಭ್ಯವಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ನನ್ನನ್ನು ಆಹ್ವಾನಿಸಲಿಲ್ಲ ಎಂದಾಗಲೇ ನನಗೆ ಮೋಸ ಮಾಡುತ್ತಿದ್ದಾರೆಂಬ ಆಲೋಚನೆ ನನಗೆ ಬಂದಿತ್ತು. ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಸಂಪುಟದಿಂದ ಕೈಬಿಟ್ಟಿದ್ದೇ ಆದರೆ, ಬಿಜೆಪಿಗೆ ಸೇರ್ಪಡೆಗೊಳ್ಳಲು ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ಈ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಸಿಎಸ್. ಶಿವಳ್ಳಿ, ಎಂಟಿಬಿ ನಾಗರಾಜ್, ಇ ತುಕರಾಮ್, ಪಿಟಿ ಪರಮೇಶ್ವರ್ ನಾಯಕ್, ರಹೀಮ್ ಖಾನ್ ಹಾಗೂ ಆರ್'ಬಿ ತಿಮ್ಮಾಪುರ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics