ಎಚ್ ಕೆ ಪಾಟೀಲ್ 
ರಾಜಕೀಯ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಕ್ಕೆ ಖುಷಿಯಾಗಿದೆ: ಎಚ್​.ಕೆ.ಪಾಟೀಲ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿದಕ್ಕೆ ಖುಷಿಯಾಗಿದೆ ಎಂದು ಹಿರಿಯ....

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿದಕ್ಕೆ ಖುಷಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್​.ಕೆ.ಪಾಟೀಲ್​ ಅವರು ಶನಿವಾರ ಹೇಳಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎಚ್. ಕೆ. ಪಾಟೀಲ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಸಚಿವ ಸ್ಥಾನ ವಂಚಿತರ ಬಂಡಾಯ ಶಮನ ಮಾಡಲು ಪ್ರಯತ್ನಿಸುತ್ತಿರುವ ಹೈಕಮಾಂಡ್​, ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ನೀಡಿದ್ದ ಪ್ರಚಾರ ಸಮಿತಿ ಅಧ್ಯಕ್ಷ ಪಟ್ಟವನ್ನು ಎಚ್.ಕೆ.ಪಾಟೀಲ್ ಅವರಿ​​ಗೆ ನೀಡಿ ಮನವೊಲಿಸಿದೆ. 
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಎಚ್.ಕೆ.ಪಾಟೀಲ್ ಅವರು, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದು ಖುಷಿ ತಂದಿದೆ. ಇದು ಸಚಿವ ಸ್ಥಾನಕ್ಕಿಂತಲೂ ದೊಡ್ಡ ಹುದ್ದೆ. ಇದೊಂದು ಮಹತ್ವದ ಮತ್ತು ಸವಾಲಿನ ಜಾವಾಬ್ದಾರಿ ಎಂದು ಹೇಳಿದ್ದಾರೆ. ಅಲ್ಲದೆ ತಮ್ನನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಬ್ಬರಿಗೂ ಧನ್ಯವಾದ ಹೇಳಿದ್ದಾರೆ.
ಎಚ್.ಕೆ. ಪಾಟೀಲ್​ ಅವರು ಸಚಿವ ಸ್ಥಾನ ಕೈತಪ್ಪಿತೆಂದು ಬಾರೀ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಅವರನ್ನು ಸಮಾಧಾನಪಡಿಸಲೆಂದೇ ಹೈಕಮಾಂಡ್​ ಈ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!