ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ 
ರಾಜಕೀಯ

ಸಂಪುಟದಿಂದ ರಮೇಶ್ ಜಾರಕಿಹೊಳಿಗೆ ಕೊಕ್ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಜಿಲ್ಲೆಯ ಹಿರಿಯ ನಾಯಕ ರಮೇಶ ಜಾರಕಿಹೊಳಿ ಅವರಿಗೆ ಸಂಪುಟದಿಂದ ಕೋಕ್ ಕೊಟ್ಟಿದಕ್ಕೆ ನನಗೆ ವೈಯಕ್ತಿಕವಾಗಿ ತುಂಬಾ ಬೇಸರ ಹಾಗೂ ದುಃಖವಾಗಿದೆ ...

ಬೆಳಗಾವಿ: ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. ಇದೇ ವೇಳೆ ಪೌರಾಡಳಿತ  ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಲಾಗಿದೆ,
ಜಿಲ್ಲೆಯ ಹಿರಿಯ ನಾಯಕ ರಮೇಶ ಜಾರಕಿಹೊಳಿ ಅವರಿಗೆ ಸಂಪುಟದಿಂದ ಕೋಕ್ ಕೊಟ್ಟಿದಕ್ಕೆ ವೈಯಕ್ತಿಕವಾಗಿ ನನಗೆ ತುಂಬಾ ಬೇಸರ ಹಾಗೂ ದುಃಖವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕ್ಷೇತ್ರದಿಂದ ರಮೇಶ ಜಾರಕಿಹೊಳಿ ಆಯ್ಕೆ ಆಗಿದ್ದಾರೆ. ಐದು ಸಲ ಶಾಸಕರಾಗಿರುವ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್  ಹಿರಿಯರು. ಹೈಕಮಾಂಡ್ ಅವರನ್ನು ಕೈಬಿಟ್ಟಿದಕ್ಕೆ ನನಗೆ ಬೇಸರವಾಗಿದೆ ಎಂದರು.
ಜಿಲ್ಲೆಯ ಮತ್ತೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದ್ದು ಬೇರೆ ವಿಚಾರ.‌ ಆದರೆ ರಮೇಶ ಅವರನ್ನು ಕೈ ಬಿಟ್ಟಿದ್ದು ದುಃಖ ಹಾಗೂ ಕೆಟ್ಟದ್ದು ಅನಿಸಿದೆ. ಹೀಗೆ ಆಗಬಾರದಿತ್ತು ಎಂದರು. ಜಿಲ್ಲೆಗೆ ಸಚಿವ ಸ್ಥಾನದ ಜತೆಗೆ ಎರಡು ಕಾರ್ಯದರ್ಶಿ ಹುದ್ದೆ ದೊರೆತಿವೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!