ರಮೇಶ್ ಜಾರಕಿಹೊಳಿ 
ರಾಜಕೀಯ

ಸಮ್ಮಿಶ್ರ ಸರ್ಕಾರಕ್ಕೆ ಸಂಪುಟ ಸಂಕಟ: ಜಾರಕಿಹೊಳಿ ತಲೆದಂಡದಿಂದ ಮತ್ತಷ್ಟು ತಲೆನೋವು!

: ಹಲವು ದಿನಗಳಿಂದ ಮುಂದೂಡುತ್ತಲೇ ಬಂದಿದ್ದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ, ಇದರಿಂದ ಅಸಮಾಧಾನಿತರನ್ನು ಸಮಾಧಾನ ಪಡಿಸುವ ತಂತ್ರ ...

ಬೆಳಗಾವಿ: ಹಲವು ದಿನಗಳಿಂದ ಮುಂದೂಡುತ್ತಲೇ ಬಂದಿದ್ದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ, ಇದರಿಂದ ಅಸಮಾಧಾನಿತರನ್ನು ಸಮಾಧಾನ ಪಡಿಸುವ ತಂತ್ರ ಇದಾಗಿದೆ. ಆದರೆ ಇದರ ಬೆನ್ನಲ್ಲೇ ಮತ್ತಷ್ಟು ಶಾಸಕರು ಬಂಡಾಯ ಏಳುವ ಸಾಧ್ಯತೆಯಿದೆ.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ತಲೆದಂಡ ಆಗುತ್ತಿರುವು ಸಮ್ಮಿಶ್ರ ಸರ್ಕಾರಕ್ಕೆ ಮತ್ತಷ್ಟು ತಲೆನೋವಾಗಲಿದೆ, ಅಸಮಾಧಾನಿತ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ. ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಗೆ ಗೈರಾಗಿದ್ದು ಬಿಜೆಪಿ ಭೋಜನಕೂಟಕ್ಕೆ ಹಾಜರಾಗಿದ್ದರು.
ಸಚಿವ ಸ್ಥಾನದಿಂದ ಕೈಬಿಟ್ಟಿರುವುದರಿಂದ ರಮೇಶ್ ಜಾರಕಿಹೊಳಿ ಸುಮ್ಮನೆ ಕೂರುವುದಿಲ್ಲ, ತಮ್ಮ ಬಂಡಾಯ ಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ,  ಜೊತೆಗೆ ಅವರ ಆಪ್ತರೊಂದಿಗೆ ಶೀಘ್ರವೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಮುನಿಸು ಮತ್ತಷ್ಟು ಹೆಚ್ಚಿದೆ, ಕೆಲವು ಕೆಲ ದಿನಗಳಿಂದ ಬಿಜೆಪಿ ನಾಯಕರ ಜೊತೆ ರಮೇಶ್ ಜಾರಕಿಹೊಳಿ ನಿರಂತರ ಸಂಪರ್ಕದಲ್ಲಿದ್ದಾರೆ, ತಮ್ಮನ್ನು ಹಾಗೂ ತಮ್ಮ ಬೆಂಬಲಿಗರನ್ನು ನಿರ್ಲಕ್ಷ್ಯ ಮಾಡಿದರೇ ಬಿಜೆಪಿ ಸೇರುವ ಬೆದರಿಕೆ ಒಡ್ಡಿದ್ದಾರೆ.
ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈಬಿಟ್ಟು, ಸತೀಶ್ ಜಾರಕಿಹೊಳಿಯನ್ನು ಸಂಪುಟಕ್ಕೆ ಸೇರಿಸುವಲ್ಲಿ ಡಿ.ಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ, ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪಿಎಲ್ ಡಿ ಬ್ಯಾಂಕ್ ಚುನಾವಣೆ ಸಮಯದಿಂದ ಉಂಟಾದ ಬಿರುಕು ಇನ್ನೂ ಮುಂದುವರಿದಿದೆ. 
ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಾದ ಆನಂದ್ ಸಿಂಗ್,ಬಿ. ನಾಗೇಂದ್ರ, ಗಣೇಶ, ಭೀಮಾ ನಾಯಕ್ ಸುಧಾಕರ್ ಮತ್ತು ಪ್ರತಾಪ್ ಗೌಡ ಪಾಟೀಲ್,ಅವರಲ್ಲಿ ಯಾರಿಗೂ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ