ನೂತನ ಸಚಿವರು 
ರಾಜಕೀಯ

ಸಂಪುಟ ವಿಸ್ತರಣೆ: ಉತ್ತರ ಕರ್ನಾಟಕಕ್ಕೆ ಮಣೆ, ಬೆಂಗಳೂರಿಗರಲ್ಲಿ ಮಡುಗಟ್ಟಿದ ಆಕ್ರೋಶ

ಹೊಸದಾಗಿ ಕುಮಾರಸ್ವಾಮಿ ಸಂಪುಟ ಸೇರಿದ 8 ಸಚಿವರ ಪೈಕಿ , ಏಳುಮಂದಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದವರಾಗಿದ್ದಾರೆ. ಈ ಮೂಲಕ ಪಕ್ಷ ಆ ಭಾಗದ ನಾಯಕರನ್ನು ತೃಪ್ತಿ ಪಡಿಸಿದೆ. ಆದರೆ. ಬೆಂಗಳೂರು ಶಾಸಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಹೊಸದಾಗಿ ಕುಮಾರಸ್ವಾಮಿ ಸಂಪುಟ ಸೇರಿದ 8 ಸಚಿವರ ಪೈಕಿ , ಏಳುಮಂದಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದವರಾಗಿದ್ದಾರೆ. ಈ ಮೂಲಕ ಪಕ್ಷ ಆ ಭಾಗದ ನಾಯಕರನ್ನು ತೃಪ್ತಿ ಪಡಿಸಿದೆ. ಆದರೆ. ಬೆಂಗಳೂರು ಶಾಸಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

 ಬೆಂಗಳೂರಿನ ಶಾಸಕರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಹಾಗೂ ಕೃಷ್ಣಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದಾಗ್ಯೂ, ರೋಷನ್ ಬೇಗ್, ಕೃಷ್ಣಪ್ಪ ತಮ್ಮ ಅತೃಪ್ತಿಯನ್ನು ವ್ಯಕ್ತಪಡಿಸಿಲ್ಲ. ಆದರೆ. ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ತಮ್ಮ ತಂದೆಗೆ  ಸಂಪುಟದಲ್ಲಿ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಳು ಬಾರಿ ಶಾಸಕರಾಗಿರುವ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಗೃಹ, ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರನ್ನು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕಡೆಗಣಿಸಲಾಗಿದೆ ಎಂಬ ಕಾರಣದಿಂದ ಸೌಮ್ಯ ರೆಡ್ಡಿ ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿ ಪಕ್ಷದ ಕೆಲಸದಿಂದ ದೂರವಿದ್ದರೆ ಕಾಂಗ್ರೆಸ್ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ನಗರದಲ್ಲಿನ ರಾಜಕೀಯ ಬಗ್ಗೆ ರಾಮಲಿಂಗಾರೆಡ್ಡಿ ಚೆನ್ನಾಗಿ ಅರ್ಥಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ ಕಾಂಗ್ರೆಸ್  ಪಕ್ಷಕ್ಕೆ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ.
ಜಯನಗರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವ ಹಿರಿಯ ನಾಯಕರ ನೆರವಿಲ್ಲದೆ ಅವರ ಮಗಳನ್ನು ಗೆಲ್ಲಿಸಿಕೊಂಡು ಬಂದಿದ್ದರು . ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಹಲವು ನಾಯಕರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!