ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು: ಕೊಟ್ಟ ಖಾತೆಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವಲ್ಲಿ ವಿಫಲರಾದ ಕಾರಣ ರಮೇಶ್ ಜಾರಕಿಹೊಳಿ ಹಾಗೂ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಇಲ್ಲಿಯವರೆಗೆ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಿಕೊಂಡು ಸಾಕಾಗಿದೆ. ಸಚಿವ ಸ್ಥಾನ, ನಿಗಮ ಮಂಡಳಿಯ ಆಕಾಂಕ್ಷಿಗಳು ಇನ್ನೇನಾದರೂ ಅಂತಹ ಚಟುವಟಿಕೆಗೆ ಮುಂದಾದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರ ಇರುವುದು ಕೆಲವರನ್ನು ತೃಪ್ತಿಪಡಿಸುವುದಕ್ಕೆ ಅಲ್ಲ. ಹೈಕಮಾಂಡ್ ಸೂಚನೆಯಂತೆ ಸಂಪುಟದಲ್ಲಿ ಪಕ್ಷದ ಪಾಲಿಕೆ ಇದ್ದ ಮಿತಿ ನೋಡಿಕೊಂಡು ಪ್ರದೇಶ, ಜಾತಿವಾರು ಪ್ರಾಧಾನ್ಯತೆ ನೀಡಿ ಸಂಪುಟ ವಿಸ್ತರಣೆ ಮಾಡಲಾಗಿದೆ.
ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಸ್ಥಾನ ನೀಡಿ ಹಿಂದೆ ಆ ಭಾಗಕ್ಕೆ ಆಗಿದ್ದ ಅನ್ಯಾಯ ಸರಿಪಡಿಸಲಾಗಿದೆ. ಎಲ್ಲರಿಗೂ ಒಮ್ಮೆಲೇ ಸಚಿವ ಸ್ಥಾನ ನೀಡಲು ಸಾಧ್ಯವಾಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೇ ಕೆಲವರಿಗೆ ರಾಜಕೀಯ ಕಾರ್ಯದರ್ಶಿ, ಇನ್ನು ಕೆಲವರಿಗೆ ಸಂಸದೀಯ ಕಾರ್ಯದರ್ಶಿ, ನಿಗಮ ಮಂಡಳಿಯಲ್ಲಿ ಅವಕಾಶ ನೀಡಿದ್ದೇನೆ. ಸುಮಾರು 40 ಜನರಿಗೆ ಸರ್ಕಾರದ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅವಕಾಶ ನೀಡಲಾಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಅದನ್ನು ಬಿಟ್ಟು ಪಕ್ಷಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ನೀಡುವುದಾಗಲಿ, ಪಕ್ಷದ ಶಿಕ್ತು ಮೀರಿ ಪಕ್ಷಾಂತರದಂತಹ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದಾಗಲೀ ಮಾಡಿದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics