ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ಪಕ್ಷಕ್ಕಿಂತಲೂ ದೊಡ್ಡವರು ಯಾರೂ ಇಲ್ಲ: ದಿನೇಶ್ ಗುಂಡೂರಾವ್

ಪಕ್ಷಕ್ಕಿಂತಲೂ ದೊಡ್ಡವರು ಯಾರೂ ಇಲ್ಲ. ರಮೇಶ್ ಜಾರಕಿಹೊಳಿ ಸಮರ್ಥವಾಗಿ ಕೆಲಸ ಮಾಡಲಿಲ್ಲ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

ಬೆಂಗಳೂರು: ಪಕ್ಷಕ್ಕಿಂತಲೂ ದೊಡ್ಡವರು ಯಾರೂ ಇಲ್ಲ. ರಮೇಶ್ ಜಾರಕಿಹೊಳಿ ಸಮರ್ಥವಾಗಿ ಕೆಲಸ ಮಾಡಲಿಲ್ಲ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. 
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಉದ್ವೇಗದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರಬಹುದು. ರಾಜೀನಾಮೆ ಅವರ ವೈಯಕ್ತಿಕ ವಿಚಾರ. ಅವರ ಹೇಳಿಕೆಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಅವರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ. ವೈಯಕ್ತಿಕ ಕಾರಣದಿಂದ ಜಾರಕಿಹೊಳಿಯವರು ಸಮರ್ಥವಾಗಿ ಕಾರ್ಯನಿರ್ವಹಿಸಲಿಲ್ಲ. ಉಸ್ತುವಾರಿ ಜಿಲ್ಲೆಯ ಪ್ರವಾಸ, ಜಿಲ್ಲೆಯ ಅಭಿವೃದ್ಧಿ ಕೆಲಸಕಾರ್ಯಗಳು ಆಗುತ್ತಿರಲಿಲ್ಲ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎಂದು ಹೇಳಿದ್ದಾರೆ. 
ಹಿರಿಯ ನಾಯಕ ರಾಮಲಿಂಗಾರೆಡ್ಡಿಯವರು ಕೂಡ ಯಾವುದೇ ಸಂದರ್ಭದಲ್ಲೂ ಪಕ್ಷದ ವಿರುದ್ಧವಾಗಿ ನಡೆದುಕೊಳ್ಳುವವರಲ್ಲ ಎಂಬ ನಂಬಿಕೆಯಿದೆ. ಕೆಲವು ವೇಲೆ ವೈಯಕ್ತಿಕ ನಿಲುವುಗಳನ್ನು ವ್ಯಕ್ತಪಡಿಸಿರಬಹುದು. ಹಿರಿಯರಾದ ಅವರ ಕೊಡುಗೆ ಪಕ್ಷಕ್ಕೆ ಸಾಕಷ್ಟಿದೆ. ಪಕ್ಷದ ಪರವಾಗಿಯೇ ಅವರು ಮಾತನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುುದಾಗಿ ಹೇಳಿದ್ದಾರೆ. 
ಇಬ್ಬರು ನಾಯಕರು ಎಲ್ಲಿಯೂ ಪಕ್ಷದಿಂದ ತಮಗೆ ಅನ್ಯಾಯವಾಗಿದೆ ಎಂದಾಗಲೀ, ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವುದಾಗಲಿ ಮಾಡಿಲ್ಲ. ಇಬ್ಬರನ್ನೂ ಸಂಪರ್ಕಿಸಿ ನಾನೇ ವೈಯಕ್ತಿಕವಾಗಿ ಮಾತನಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?