ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಯಾವುದೇ ಅತೃಪ್ತ ಶಾಸಕರೂ ನಮ್ಮ ಸಂಪರ್ಕದಲ್ಲಿಲ್ಲ. ನಾನು ಯಾರನ್ನೂ ಸಂಪರ್ಕಿಸುವ ಪ್ರಯತ್ನವನ್ನೂ ಮಾಡಿಲ್ಲ. ಸರ್ಕಾರ ಉರುಳಿಸುವ ಯಾವುದೇ ಯೋಜನೆಗಳೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುವ ಪ್ರಯತ್ನಗಳನ್ನು ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಲ್ಲಿಯವರೆಗೆ ಹೋಗಿ ಮುಟ್ಟುತ್ತೆದ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಸ್ಥಿತಿಯಲ್ಲಿ ನಾವು ಸರ್ಕಾರ ರಚಿಸುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಸರ್ಕಾರ ಉರುಳಿಸುವ ಯಾವುದೇ ಯೋಜನೆಗಳನ್ನೂ ರೂಪಿಸಿಲ್ಲ. ನಾವು ಪ್ರತಿಪಕ್ಷದಲ್ಲಿಯೇ ಇದ್ದುಕೊಂಡು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ನಲ್ಲಿನ ಗೊಂದಲದ ಬಗ್ಗೆ ನಮ್ಮ ಕಡೆ ಬೊಟ್ಟು ಮಾಡಿ ತೋರಿಸಿದರೆ ನಾವು ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ.
ಶಾಸಕ ಉಮೇಶ್ ಕತ್ತಿ ಜೊತೆಗೆ ಎಲ್ಲರೂ ಸಂಪರ್ಕದಲ್ಲಿರುತ್ತಾರೆ. ಹೊಸ ಸರ್ಕಾರ ರಚನೆಯ ಯಾವುದೇ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics