ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ಸರ್ಕಾರ ಬೀಳದಿದ್ದರೆ ಉಮೇಶ್ ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್ ಸವಾಲು

ಮುಂದಿನ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಬಿಜಡೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಕಿಡಿಕಾರಿದ್ದಾರೆ...

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಬಿಜಡೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಕಿಡಿಕಾರಿದ್ದಾರೆ. 
ಕತ್ತಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, 24 ಗಂಟೆಗಳಲ್ಲಿ ಸರ್ಕಾರ ಬೀಳದಿದ್ದರೆ ರಾಜೀನಾಮೆ ನೀಡಿ ಹೊರಗೆ ಬರುತ್ತೀರಾ ಎಂದು ಸವಾಲು ಹಾಕಿದ್ದಾರೆ. 
ಹಿರಿಯ ಶಾಸಕರಾದ ಉಮೇಶ್ ಕತ್ತಿಯವರು ಆಧಾರರಹಿತವಾಗಿ ಮಾತನಾಡುತ್ತಿದ್ದಾರೆ. 24 ಗಂಟೆಗಳಲ್ಲಿ ಸರ್ಕಾರ ಬೀಳದಿದ್ದರೆ ಅವರು ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ತಮ್ಮ ಘನತೆಗೆ ತಕ್ಕಂತೆ ಆಧಾರವಿದ್ದರೆ ಮಾತ್ರ ಮತನಾಡಬೇಕು. ಈ ರೀತಿ ಹುಚ್ಚುಚ್ಚಾಗಿ ಮಾತನಾಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ತಿಳಿಸಿದ್ದಾರೆ. 
ಬಿಜೆಪಿ ನಾಯಕರು ಹಲವು ದಿನಗಳಿಂದ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಅನಗತ್ಯವಾಗಿ ಅಸ್ಥಿರತೆ ಸೃಷ್ಟಿಸುವ ಯತ್ನ ನಡೆಸುತ್ತಿದ್ದಾರೆ. ಇದೀಗ ಉಮೇಶ್ ಕತ್ತಿಯವರು ಭವಿಷ್ಯವಾಣಿ ನುಡಿದಿದ್ದಾರೆ. ಕಪೋಲಕಲ್ಪಿತ ಹೇಳಿಕೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಉಮೇಶ್ ಕತ್ತಿಯವರ ಮಾತಿನಂತೆ 24 ಗಂಟೆಗಳಲ್ಲಿ ಸರ್ಕಾರ ಬೀಳಿಸಲಿ. ಮಾತು ಉಳಿಸಿಕೊಳ್ಳಲು ಆಗದಿದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!