ರಮೇಶ್ ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ರಾಜೀನಾಮೆ ನೀಡದಂತೆ, ವರ್ತನೆ ಬದಲಿಸಿಕೊಳ್ಳಲು ರಮೇಶ್ ಮನವೊಲಿಸುತ್ತೇನೆ: ಸತೀಶ್ ಜಾರಕಿಹೊಳಿ

ಇತ್ತೀಚೆಗೆ ನಡೆದ ಸಂಪುಟ ಪುನಾರಚನೆ ವೇಳೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ, ಆದರೆ ಅವರ ಸಹೋದರ ರಮೇಶ್ ಜಾರಕಿಹೊಳಿ ಅವರನ್ನು ...

ಬೆಳಗಾವಿ: ಇತ್ತೀಚೆಗೆ ನಡೆದ ಸಂಪುಟ ಪುನಾರಚನೆ ವೇಳೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ, ಆದರೆ ಅವರ ಸಹೋದರ  ರಮೇಶ್ ಜಾರಕಿಹೊಳಿ ಅವರನ್ನು ಕೈಬಿಡಲಾಗಿದೆ.
ಇದರಿಂದ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ, ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ, ಆದರೆ ಸಹೋದರನನ್ನು ಮನವೊಲಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಸತೀಶ್ ಹೆಗಲಿಗೆ ನೀಡಿದೆ.
ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇದುವರೆಗೂ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿಲ್ಲ, ಶೀಘ್ರವೇ ಅವರನ್ನು ಭೇಟಿ ಮಾಡಿ ರಾಜಿನಾಮೆ ನೀಡದಂತೆ ಮನವೊಲಿಸುವುದಾಗಿ ತಿಳಿಸಿದ್ದಾರೆ.
ರಮೇಶ್ ಸಚಿವರಾಗಿದ್ದ ವೇಳೆ ತಮ್ಮ ವರ್ತನೆ ಬದಲಿಸಿಕೊಳ್ಳುವಂತೆ ಅವರಿಗೆ ಸಲಹೆ ನೀಡಿದ್ದೆ, ಅಧಿಕಾರಿಗಳ ಜೊತೆ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ತಿಳಿಸಿದ್ದೆ, ಆದರೆ ಅದನ್ನು ಅವರು ಮಾಡಲಿಲ್ಲ, ಈಗಲಾದರೂ ಅವರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ಸತೀಶ್ ತಿಳಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರಲು ಕಳೆದ ಆರು ತಿಂಗಳಿಂದ ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗಿಲ್ಲ, ಕಾಂಗ್ರೆಸ್ ನ ಯಾವೊಬ್ಬ ಶಾಸಕರು ಪಕ್ಷ ತೊರೆಯುತ್ತಿಲ್ಲ, ತನ್ನ ಪ್ಲಾನ್ ನಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!