ಸಂಗ್ರಹ ಚಿತ್ರ 
ರಾಜಕೀಯ

ಖಾತೆ ಕ್ಯಾತೆ ಮುಂದುವರೆದಿದ್ದರೂ ಮನಸ್ತಾಪಗಳೇ ಇಲ್ಲ ಎಂದ ಕಾಂಗ್ರೆಸ್

ಖಾತೆ ಹಂಚಿಕೆ ಕುರಿತಂತೆ ಎದುರಾಗಿರುವ ಮನಸ್ತಾಪಗಳು ಮುಂದುವರೆದಿದ್ದರೂ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ...

ಬೆಂಗಳೂರು: ಖಾತೆ ಹಂಚಿಕೆ ಕುರಿತಂತೆ ಎದುರಾಗಿರುವ ಮನಸ್ತಾಪಗಳು ಮುಂದುವರೆದಿದ್ದರೂ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಹಿನ್ನಲೆಯಲ್ಲಿ ಗುರುವಾರವೂ ಹೆಚ್.ಡಿ.ಕುಮಾರಸ್ವಾಮಿಯವರ ಸಂಪುಟ ಸೇರಿದ 8 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಲಿಲ್ಲ. ಆದರೆ, ರಾಜ್ಯ ನಾಯಕರ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದ್ದ ಗೃಹ ಖಾತೆ ಹಾಗೂ ವೈದ್ಯ ಶಿಕ್ಷಣ ಖಾತೆಗಳು ಪ್ರಭಾವಿಗಳಾದ ಪಮೇಶ್ವರ್ ಹಾಗೂ ಡಿಕೆ.ಶಿವಕುಮಾರ್ ಅವರ ಕೈತಪ್ಪುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಆದರೆ, ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಘೋಷಣೆಗಳಾಗಿಲ್ಲ. 
ಖಾತೆ ಹಂಚಿಕೆ ವಿಚಾರವನ್ನು ಕಾಂಗ್ರೆಸ್ ಪಾಳಯದ ಹಿರಿಯ ನಾಯಕರು ರಾಹುಲ್ ಗಾಂಧಿಯವರ ಅಂಗಳಕ್ಕೆ ಬಿಟ್ಟಿದ್ದಾರೆ. ಈ ನಡುವೆ ತಮ್ಮ ಹಾಗೂ ಪರಮೇಶ್ವರ್ ನಡುವೆ ಖಾತೆ ಬಿಟ್ಟುಕೊಡುವ ವಿಚಾರ ಸಂಬಂಧ ವಾಗ್ವಾದ ನಡೆದಿದೆ ಎಂಬ ಸುದ್ದಿಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರಸ್ಕರಿಸಿದ್ದಾರೆ. 
ಇದರಂತೆ ಪಮೇಶ್ವರ್ ಅವರು ಖಾತೆ ಬಿಟ್ಟುಕೊಡುವ ಕುರಿತು ಪ್ರತಿಕ್ರಿಯೆ ನೀಡಿದ್ದು, ನನ್ನ ಬಳಿ ಇರುವ ಗೃಹ ಇಲಾಖೆ ಸೇರಿದಂತೆ ಯಾವ ಖಾತೆ ಬಿಟ್ಟುಕೊಡಲು ನನಗೆ ತಕರಾರಿಲ್ಲ. ನನ್ನನ್ನೂ ಸೇರಿ ಎಲ್ಲಾ ಸಚಿವರಿಗೂ ಒಂದೇ ಫಾರ್ಮುಲಾ ಅನ್ವಯವಾಗುತ್ತದೆ. ಯಾರಿಗೆ ಯಾವ ಖಾತೆ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ