ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸಮ್ಮಿಶ್ರ ಸರ್ಕಾರ ಸುಗಮವಾಗಿ ಸಾಗುತ್ತಿದೆ: ಕುಮಾರಸ್ವಾಮಿ ಸ್ಪಷ್ಟನೆ

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಭಿನ್ನಮತವಿಲ್ಲ ಸರ್ಕಾರ ಸುಗಮವಾಗಿ ಸಾಗುತ್ತಿದೆ ಎಂದು ಮುಖ್ಯಮಂತ್ರಿ ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಭಿನ್ನಮತವಿಲ್ಲ ಸರ್ಕಾರ ಸುಗಮವಾಗಿ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಹಾಗೂ ಕಾಂಗ್ರೆಸ್ ಬಿಗ್ ಬಾಸ್ ರೀತಿ ವರ್ತಿಸುತ್ತಿದೆ ಎಂಬ ಬಗ್ಗೆ ತಮ್ಮದೇ ಜೆಡಿಎಸ್ ಪಕ್ಷದ ಕೆಲವು ಮುಖಂಡರು  ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾರಲ್ಲೂ ಅತೃಪ್ತಿಯಿಲ್ಲ, ನಿಗಮ ಮಂಡಳಿಗಳ ನೇಮಕಾತಿ ಕೂಡ ಸುಗಮವಾಗಿಯೇ ನಡೆಯುತ್ತಿದೆ ಎಂದು ಸಮರ್ಥನೆ ನೀಡಿದ್ದಾರೆ.
ಕೆಲವು ಮಂದಿ ಕೆಲ ವಿಷಯಗಳ ಬಗ್ಗೆ ಚರ್ಚಿಸುತ್ತಾರೆ ಅದಕ್ಕೆ ನಾನು ಹೊಣೆಯಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ದ ಅಭ್ಯರ್ಥಿಗಳು ಸ್ಪರ್ಧಿಸಬೇಕೆಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನಿಯಮವನ್ನು ಉಲ್ಲಂಘಿಸುತ್ತಿದೆ, ಕುಮಾರಸ್ವಾಮಿ ಶಾಂತಿಯುತವಾಗಿ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ಜೆಡಿಎಸ್ ಹಿರಿಯ  ನಾಯಕ ಬಸವರಾಜ ಹೊರಟ್ಟಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಹಾಗೇನು ಇಲ್ಲ. ಎಲ್ಲವೂ ಸುಗಮವಾಗಿ ನಡೆದುಕೊಂಡು ಹೋಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!