ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ 
ರಾಜಕೀಯ

ಆನಂದ್ ಸಿಂಗ್ ಸೇರ್ಪಡೆ: ಸಚಿವ ಲಾಡ್ ವಿರುದ್ದ ಹರಿಹಾಯ್ದ ಕಾಂಗ್ರೆಸ್ ಕಾರ್ಯಕರ್ತರು

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿದ್ಧತೆಗಳ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಹಾಗೂ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಆನಂದ್ ಸಿಂಗ್ ಅವರನ್ನು...

ಬಳ್ಳಾರಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿದ್ಧತೆಗಳ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಹಾಗೂ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಆನಂದ್ ಸಿಂಗ್ ಅವರನ್ನು ಸ್ವಾಗತಿಸುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. 
ಹೊಸಪೇಟೆಯ ಖಾಸಗಿ ಹೋಟೆಲ್ ನಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಲಾಡ್ ವಿರುದ್ಧ ಹರಿಹಾಯ್ದರು. ಬಿಜೆಪಿ ಮಾಜಿ ಶಾಸಕ ಆನಂದ್ ಸಿಂಗ್ ಸೇರ್ಪಡೆ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತಂತೆ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಪಕ್ಷದ ಅಭಿಪ್ರಾಯಗಳನ್ನು ತೆಗೆದುಕೊಳ್ಳದೇ ಇರುವುದಕ್ಕೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು. 
ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿ ಆನಂದ್ ಸಿಂಗ್ ಅವರು ಸಂಬಂಧಿ ದೀಪಕ್ ಸಿಂಗ್ ಅವರು ಕಾಂಗ್ರೆಸ್ ಹಾಗೂ ಲಾಡ್ ವಿರುದ್ದ ಘೋಷಣಾ ವಾಕ್ಯಗಳನ್ನು ಕೂಗಿದರು. 
ಈ ವೇಳೆ ತಾಳ್ಮೆ ಕಳೆದುಕೊಂಡ ಲಾಡ್ ಅವರು, ದೀಪಕ್ ಸಿಂಗ್ ಅವರ ಜೊತೆಗೆ ಮಾತಿನ ಚಕಮಕಿಗೆ ಇಳಿದರು. ದೀಪಕ್ ಸಿಂಗ್ ಅವರು ಸಹೋದರ ಆನಂದ್ ಸಿಂಗ್ ಜೊತೆಗೂ ಮಾತಿನ ಚಕಮಕಿ ನಡೆಸಿದರು. ಒಂದೆಡೆ ಸಚಿವ ಲಾಡ್, ಆನಂದ್ ಸಿಂಗ್ ಒಂದೆಡೆಯಾದರೆ, ದೀಪಕ್ ಸಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತೊಂದೆಡೆ ನಿಂತು ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿದ್ದರು. 
ಈ ರೀತಿಯ ಬೆಳವಣಿಗೆಗಳಿಂದಾಗಿ ಅಸಮಾಧಾನಗೊಂಡ ಹಲವು ಕಾರ್ಯಕರ್ತರು, ವೇದಿಕೆಯಿಂದ ಹೊರ ನಡೆದರು. ಬಳಿಕ ಕೇವಲ ಹೆಸರು ಮಾತ್ರಕ್ಕೆ ಸಭೆ ಮುಂದುವರೆಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!