ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ! 
ರಾಜಕೀಯ

ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ..

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ ಮಾತನಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ಅಸಮಾಧಾನ ಮೂಡಿದೆ. 
ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಅನುದಾನ ಬಳಕೆ ಮಾಡಿಕೊಳ್ಳದೇ ಇರುವುದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಆದರೆ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸುವುದಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಶಬ್ದವನ್ನೂ ಮಾತನಾಡಲಿಲ್ಲ. ಇದು ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ತೀವ್ರ ಅಸಮಾಧಾನ ಮೂಡುವಂತೆ ಮಾಡಿದೆ. 
ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದರು, ಈ ಮೂಲಕ ಪರೋಕ್ಷವಾಗಿ ಮೋದಿಯವರು ಮಹದಾಯಿ ವಿವಾದ ಪ್ರಸ್ತಾಪಿಸುವುದಿಲ್ಲ ಎಂಬ ಸುಳಿವು ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT