ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಗಳಲ್ಲೊಬ್ಬರಾದ ಎಐಸಿಸಿ ಕಾರ್ಯದರ್ಶಿ ಮಧುಗೌಡ ಯಕ್ಷಿ 
ರಾಜಕೀಯ

ಓವೈಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿಲ್ಲ: ಮಧುಗೌಡ ಯಕ್ಷಿ ಸ್ಪಷ್ಟನೆ

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಗಳಲ್ಲೊಬ್ಬರಾದ ಎಐಸಿಸಿ ಕಾರ್ಯದರ್ಶಿ ಮಧುಗೌಡ ಯಕ್ಷಿ ಭಾನುವಾರ ಸ್ಪಷ್ಟಪಡಿಸಿದ್ದಾರೆ...

ಬೆಂಗಳೂರು: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಗಳಲ್ಲೊಬ್ಬರಾದ ಎಐಸಿಸಿ ಕಾರ್ಯದರ್ಶಿ ಮಧುಗೌಡ ಯಕ್ಷಿ ಭಾನುವಾರ ಸ್ಪಷ್ಟಪಡಿಸಿದ್ದಾರೆ. 
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓವೈಸಿ ಪಕ್ಷದ ಜೊತೆಗೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಯಾವ ರೀತಿಯ ಒಪ್ಪಂದವನ್ನೂ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಓವೈಸಿಯವರು ಕರ್ನಾಟಕದಲ್ಲಿ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ಕಾಂಗ್ರೆಸಿಗರು ಅವರೊಂದಿಗೆ ಒಳಒಪ್ಪಂದ ಮಾಡಿಕೊಂಡಿದ್ದಾರೆಂದು ಈ ಹಿಂದೆ ಬಿಜೆಪಿ ಆರೋಪ ಮಾಡಿತ್ತು. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಓವೈಸಿಯವರೊಂದಿಗೆ ನಾವು ಯಾವುದೇ ರೀತಿಯ ಸಭೆಯನ್ನು ನಡೆಸಿಲ್ಲ. ಈ ರೀತಿಯ ಆರೋಪದಲ್ಲಿ ಯಾವುದೇ ರೀತಿಯ ಸತ್ಯಗಳಿಲ್ಲ. ಬಿಜೆಪಿಯವರೇ ಮುಸ್ಲಿಂ ಮತ ಒಡೆಯಲು ಓವೈಸಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದ ಪ್ರತ್ಯಾರೋಪ ಮಾಡಿದರು. 
ಮುಸ್ಲಿಮರು, ಹಿಂದುಳಿದವರು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮತಗಳನ್ನು ಪಡೆಯುವ ಸಲುವಾಗಿ ಸಿದ್ದರಾಮಯ್ಯ ಅವರು ಸಾಕಷ್ಟು ಪರಿಶ್ರಮಗಳನ್ನು ಪಟ್ಟಿದ್ದಾರೆ. ನಾವು ಮುಸ್ಲಿಂ ಸಮುದಾಯದವರ ಬೆಂಬಲ ನಮಗಿದೆ. ಗುಜರಾತ್ ಹಾಗೂ ಬಿಹಾರ ರಾಜ್ಯಗಳ ಚುನಾವಣೆಗಳಲ್ಲೂ ಈ ರೀತಿಯ ತಂತ್ರಗಳನ್ನು ಬಳಕೆ ಮಾಡಿದ್ದೆವು. ಇದು ಉತ್ತಮ ಫಲಿತಾಂಶವನ್ನು ನೀಡಿತ್ತು. ಇದೀಗ ಕರ್ನಾಟಕದಲ್ಲೂ ಇದೇ ತಂತ್ರವನ್ನು ಬಳಕೆ ಮಾಡುತ್ತೇವೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!