ರಾಜಕೀಯ

ಪ್ರಧಾನಿ ಮೋದಿ ಕರ್ನಾಟಕವನ್ನು ಅವಮಾನಿಸಿದ್ದಾರೆ: ಜಿ. ಪರಮೇಶ್ವರ್

Manjula VN
ಬೆಂಗಳೂರು: ಕರ್ನಾಟಕವನ್ನು ಕ್ರಿಮಿನಲ್'ಗಳ ರಾಜ್ಯವೆಂದು ಕರೆಯುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯವನ್ನು ಅವಮಾನಿಸಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ. 
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ನಿನ್ನೆಯಷ್ಟೇ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. 
ಪ್ರಧಾನಿ ಮೋದಿಯವರ ಹೇಳಿಕೆಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್ ಅವರು, ಅಂತರಾಷ್ಟ್ರೀಯ ಸಂಸ್ಥೆಗಳು ರಾಜ್ಯ ರಾಜಧಾನಿ ಬೆಂಗಳೂರಿಗೆ ಅತ್ಯಂತ ಕ್ರಿಯಾಶೀಲ ನಗರ ಹಾಗೂ ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಬಿರುದುಗಳನ್ನು ನೀಡುತ್ತಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಿಗೆ ಬಂದು ನಮ್ಮದು ಕ್ರಿಮಿನಲ್ ಗಳ ರಾಜ್ಯವೆಂದು ಕರೆದಿದ್ದಾರೆ. ಈ ಮೂಲಕ ಮೋದಿಯವರು ರಾಜ್ಯವನ್ನು ಅವಮಾನಿಸಿದ್ದಾರೆಂದು ಹೇಳಿದ್ದಾರೆ. 
ಇದೇ ವೇಳೆ ಮಹದಾಯಿ ವಿವಾದ ಸಂಬಂಧ ಪ್ರಧಾನಿ ಮೋದಿ ಮೌನವಹಿಸಿರುವ ಹಿನ್ನಲೆಯಲ್ಲಿ ತೀವ್ರವಾಗಿ ಕಿಡಿಕಾರಿರುವ ಅವರು, ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯ ಸರ್ಕಾರ ಹಲವು ಬಾರಿ ಪ್ರಧಾನಿಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದೆ. ಆದರೆ, ರಾಜ್ಯಕ್ಕೆ ಆಗಮಿಸಿದ್ದರೂ. ಮಹದಾಯಿ ವಿಚಾರದ ಬಗ್ಗೆ ಮೋದಿಯವರು ಒಂದು ಮಾತನ್ನು ಆಡಿಲ್ಲ ಎಂದು ತಿಳಿಸಿದ್ದಾರೆ. 
SCROLL FOR NEXT