ದಾವಣಗೆರೆ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕರೆ ನೀಡಿರುವುದು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯಲ್ಲಿ ಹಮ್ಮಿಕೊಂಡಿರು ಕನಕ ಗುರುಪೀಠದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಡಪಕ್ಷಗಳ ಜೊತೆಗಿನ ಚುನಾವಣೆ ಹೊಂದಾಣಿಕೆ ಕುರಿತಂತೆ ಸೋನಿಯಾ ಗಾಂಧಿ ಹೇಳಿಕೆ ರಾಷ್ಟ್ರ ಮಟ್ಟಕ್ಕೆ ಸೀಮಿತ. ಅದು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎಂದರು. ಅಲ್ಲದೆ ಬಿಎಸ್ಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸಿಎಂ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಸರ್ವೆ ನಡೆಸಿದೆ. ಅಲ್ಲದೇ ಕ್ಷೇತ್ರಗಳಿಗೆ ವೀಕ್ಷಕರೂ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ ಎಂದು ಸಿಎಂ ತಿಳಿಸಿದರು.
ಇದೇ ವೇಳೆ ಬಿಸಿ ಬೆಂಗಳೂರಿನಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಂಬಂಧಪಟ್ಟ ಇಲಾಖೆ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics