ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೈದ್ರಾಬಾದ್ ಕರ್ನಾಟಕಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ.
ಹೀಗಾಗಿ ಫೆಬ್ರವರಿ 24 ರಿಂದ ರಾಹುಲ್ ಮೂರು ದಿನಗಳ ಕಾಲ ಮುಂಬಯಿ- ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ, 2ನೇ ಹಂತದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ ಆಗಮನದಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಿರುವ ಸಿದ್ದರಾಮಯ್ಯ,ರಾಹುಲ್ ಗಾಂಧಿ ಪ್ರಚಾರ ನಡೆಸಿರುವ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಯಿಸಿರುವ ಸಿಎಂ, ಒಂದು ವೇಳೆ ಬಿಜೆಪಿ ಆರೋಪ ನಿಜವಾಗಿದ್ದರೇ ಗುಜರಾತ್ ಚುನಾವಣೆಯಲ್ಲಿ ಹೇಗೆ ಜಯದ ಸಮೀಪಕ್ಕೆ ತಲುಪುಲು ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ.
ಮುಂಬಯಿ ಕರ್ನಾಟಕ ಪ್ರದೇಶದಲ್ಲಿ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತಿತರ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ, ಅದಾದ ನಂತರ ಮೈಸೂರು ಭಾಗದಲ್ಲಿಯೂ ಪ್ರವಾಸ ನಡೆಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.