ಆಹಾರ ಪದ್ಧತಿ ಅವರವರ ವಯಕ್ತಿಕ ವಿಚಾರ: ಬಿಎಸ್ ವೈ ಆರೋಪಕ್ಕೆ ಸಿಎಂ ತಿರುಗೇಟು
ಆಹಾರ ಪದ್ಧತಿ ಅವರವರ ವೈಯಕ್ತಿಕ ವಿಚಾರ ಎಂದು ಪ್ರತಿಕ್ರಿಯಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ...
ಬೆಂಗಳೂರು: ಆಹಾರ ಪದ್ಧತಿ ಅವರವರ ವೈಯಕ್ತಿಕ ವಿಚಾರ ಎಂದು ಪ್ರತಿಕ್ರಿಯಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ''ರಾಹುಲ್ ಗಾಂಧಿಯವರು ಮಾಂಸ ಸೇವಿಸಿ ದೇವಾಲಯಕ್ಕೆ ಭೇಟಿ ಡಿದ್ದಾರೆಂದು ಯಡಿಯೂರಪ್ಪ ಹೇಳಿದ್ದಾರೆ. ಆಹಾರ ಸಂಸ್ಕೃತಿ ಎನ್ನುವುದು ವೈಯಕ್ತಿಕವಾದುದು. ಅಷ್ಟಕ್ಕೂ ಬಿಎಸ್ವೈ ಆರೋಪಿಸಿದಂತೆ ರಾಹುಲ್ ಅವರು ದೇವಾಲಯಕ್ಕೆ ಹೋಗುವ ಮೊದಲು ಮಾಂಸಾಹಾರ ಸೇವನೆ ಮಾಡಿರಲಿಲ್ಲ. ಈ ಬಗ್ಗೆ ರಾಹುಲ್ ಅವರೇ ಸ್ಪಷ್ಟ ಪಡಿಸಿದ್ದಾರೆ,'' ಎಂದು ತಿಳಿಸಿದ್ದಾರೆ.
ಈ ಮೊದಲು ಸಿಎಂ ಸಿದ್ದರಾಮಯ್ಯ ಮೀನು ಆಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದರು. ಇನ್ನೂ ಯಡಿಯೂರಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅಂದು ಉಪಾಹಾರ ಕೂಟದಲ್ಲಿ ನಾನೂ ಇದ್ದೆ. ರಾಹುಲ್ ಗಾಂಧಿ ಉಪಾಹಾರಕ್ಕೆ ಚಪಾತಿ, ಆಲೂಗೆಡ್ಡೆ ಪಲ್ಯ, ದಾಲ್ ಮತ್ತು ಪಾಯಸ ಸೇವಿಸಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.