ಶರದ್ ಪವಾರ್ 
ರಾಜಕೀಯ

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜೊತೆ ಮೈತ್ರಿ: ಶರದ್ ಪವಾರ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಜೊತೆ ಮಾತುಕತೆ ನಡೆಸಿರುವುದಾಗಿ ಎನ್ ಸಿಪಿ ...

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಜೊತೆ ಮಾತುಕತೆ ನಡೆಸಿರುವುದಾಗಿ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಎನ್ ಸಿಪಿ ಕಾರ್ಯಕರ್ತರ ಸಭೆ ನಂತರ ಮಾತನಾಡಿದ ಅವರು, ದೇವೇಗೌಡ, ಕುಮಾರಸ್ವಾಮಿ ಮತ್ತು ಪಿಜಿಆರ್ ಸಿಂಧ್ಯಾ ಅವರ ಜೊತೆ ಸಮಾಲೋಚನೆ ನಡೆಸಿದ್ದೇನೆ, ಮುಂಬರುವ ಚುನಾವಣೆಯಲ್ಲಿ ಒಟ್ಟಿಗೆ ಕೆಲಸ ಮಾಡುವುದು ಸಾಧ್ಯ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಎನ್‌ಸಿಪಿ ನೆಲೆ ಸೀಮಿತವಾಗಿದ್ದರೂ, ಜೆಡಿಎಸ್‌ ಪಕ್ಷದೊಂದಿಗೆ ಕೈಜೋಡಿಸಿ ಚುನಾವಣೆ ಎದುರಿಸಲು ಎನ್‌ಸಿಪಿ ಸಿದ್ಧವಿದೆ. ಅತಂತ್ರ ವಿಧಾನಸಭೆ ನಿರ್ಮಾಣವಾದರೂ ಬಿಜೆಪಿ ಜತೆ ಅಧಿಕಾರ ಹಂಚಿಕೊಳ್ಳಬಾರದು ಎಂಬ ತೀರ್ಮಾನಕ್ಕೆ ಎರಡೂ ಕಡೆಯಿಂದ ಸಹಮತ ಇದೆ'' ಎಂದು ಹೇಳಿದರು.. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದವಿದ್ದೇವೆ ಎಂದು ತಿಳಿಸಿದ್ದಾರೆ.
ಎನ್‌ಸಿಪಿಗೆ ಶಕ್ತಿ ಇರುವ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಉಳಿದ ಕಡೆಗಳಲ್ಲಿ ಜೆಡಿಎಸ್‌ ಮತ್ತು ಬಿಎಸ್‌ಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತೇವೆ. ಕೇರ ಹಾಗೂ ಇತರ ರಾಜ್ಯಗಳಲ್ಲೂ ಇದೇ ರೀತಿ ಹೋರಾಟ ನಡೆಸಿದ್ದೆವು'' ಎಂದರು.
ಜೆಡಿಎಸ್‌ ಜತೆಗೆ ಬಿಎಸ್‌ಪಿ, ಎನ್‌ಸಿಪಿ ಮೈತ್ರಿ ಏರ್ಪಟ್ಟಿದ್ದು, ಸಿಪಿಐ ಹಾಗೂ ಸಿಪಿಐ (ಎಂ) ಪಕ್ಷಗಳೊಂದಿಗೂ ಚುನಾವಣಾ ಮೈತ್ರಿ ಪ್ರಯತ್ನ ಮುಂದುವರಿದಿದೆ. ಸ್ವತಃ ದೇವೇಗೌಡರೇ ತೃತೀಯ ಶಕ್ತಿಗಳ ಬೆಂಬಲ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಬಿಎಸ್‌ಪಿಯ ಮಾಯಾವತಿ ಅವರು ಶನಿವಾರ ಬೆಂಗಳೂರು ಹೊರವಲಯದಲ್ಲಿ ನಡೆಯಲಿರುವ ಜೆಡಿಎಸ್‌ನ 'ವಿಕಾಸಪರ್ವ' ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಚುನಾವಣಾ ಪ್ರಚಾರಕ್ಕೂ ಆಗಮಿಸಲು ಒಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ