ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ನಮ್ಮದು ಚುನಾವಣಾ ಬಜೆಟ್ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಅಭಿವೃದ್ಧಿ, ಬೆಳವಣಿಗೆ ಆಧಾರಿತ ಬಜೆಟ್ ಆಗಿದ್ದು, ಚುನಾವಣಾ ಬಜೆಟ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ನಮ್ಮದು ಅಭಿವೃದ್ಧಿ, ಬೆಳವಣಿಗೆ ಆಧಾರಿತ ಬಜೆಟ್ ಆಗಿದ್ದು, ಚುನಾವಣಾ ಬಜೆಟ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿದ ಬಳಿಕ ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳ ಕುರಿತಂತೆ ಸುದ್ದಿಗಾರರದೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮದು ಬೆಳವಣಿಗೆ ಆಧಾರಿತ ಬಜೆಟ್ ಆಗಿದ್ದು, ಚುನಾವಣಾ ಬಜೆಟ್ ಆಗಿಲ್ಲ ಎಂದು ಹೇಳಿದ್ದಾರೆ. 
ವಿರೋಧ ಪಕ್ಷಗಳ ನಾಯಕರದ್ದು ರಾಜಕೀಯ ಪ್ರೇರಿತ ಆರೋಪವಾಗಿದೆ. ಜನರನ್ನು ತಪ್ಪು ಹಾದಿಗೆಳೆಯಲು ಯತ್ನ ನಡೆಸುತ್ತಿದ್ದಾರೆ. ಒಂದು ವೇಳೆ ನಮ್ಮದು ಚುನಾವಣಾ ಬಜೆಟ್ ಆಗಿದ್ದರೆ, ಸಾಕಷ್ಟು ಘೋಷಣೆಗಳನ್ನು ಮಾಡಬಹುದಿತ್ತು. ಆದರೆ, ನಾವು ಅದನ್ನು ಮಾಡಿಲ್ಲ. ನಾವು ದ್ವಿಗುಣ ಬಜೆಟ್ ನ್ನು ಮಂಡನೆ ಮಾಡಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ. ಚುನಾವಣೆ ಅಂತ್ಯಗೊಂಡ ಬಳಿಕ ಎಲ್ಲಾ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಎಲ್ಲಾ ವಲಯಗಳನ್ನು ಪರಿಗಣಿಸಿ ನಾವು ಬಜೆಟ್ ಮಂಡನೆ ಮಾಡಿದ್ದೇವೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಹಿಂದುಳಿದ ವರ್ಗದ ಜನರು ಸೇರಿದಂದೆ ಎಲ್ಲಾ ವಲಯಗಳನ್ನು ಪರಿಗಣಿಸಿದ್ದೆವು. ನಮ್ಮದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗಿದೆ. ಬಜೆಟ್ ಸಂಪೂರ್ಣ ಆಯವ್ಯಯ ರೂ. 2,86,790 ಕೋಟಿ ಆಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ