ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
ಬೆಂಗಳೂರು: ದೇಶದ ಪ್ರಧಾನಮಂತ್ರಿಯಾಗಿ ಮುಂದುವರೆಯಲು ನರೇಂದ್ರ ಮೋದಿಯವರು ಯೋಗ್ಯ ವ್ಯಕ್ತಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಗಳಂತೆ ಮಾತನಾಡುತ್ತಿಲ್ಲ. ಮಾತನಾಡಲು ರಾಜ್ಯ ಹಾಗೂ ದೇಶದಲ್ಲಿ ಸಾಕಷ್ಟು ವಿಚಾರಗಳಿವೆ. ಆದರೆ, ಆ ವಿಚಾರಗಳ ಬಗ್ಗೆ ಅವರು ಬಾಯಿ ಬಿಡುತ್ತಿಲ್ಲ. ರಾಜಕೀಯ ಪ್ರೇರಿತ ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ಮೋದಿಯವರು ನೀಡುತ್ತಿದ್ದು, ಪ್ರಧಾನಮಂತ್ರಿಯಾಗಿ ಮುಂದುವರೆಯಲು ಮೋದಿ ಯೋಗ್ಯರಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ವಾಕ್ಸಮರಗಳು ನಡೆಯುತ್ತಲೇ ಇದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವುದರಿಂದ ಹೊಸ ಹೊಸ ಹಗರಣಗಳು ಹಾಗೂ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics