ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಚಿತ್ರದಲ್ಲಿ ಬಿ.ಎಸ್.ಯಡಿಯೂರಪ್ಪ, ಪಾಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ ಇದ್ 
ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯುವ ಕಾಲ ಸನ್ನಿಹಿತ: ಅಮಿತ್ ಶಾ

ಕರ್ನಾಟಕ ಜನತೆಯ ಸಿಟ್ಟು, ಆಕ್ರೋಶಗಳನ್ನು ಬೇರೆಡೆಗೆ ಹರಿಸಿ ಸಿದ್ದರಾಮಯ್ಯ ಸರ್ಕಾರವನ್ನು....

ಉಡುಪಿ: ಕರ್ನಾಟಕ ಜನತೆಯ ಸಿಟ್ಟು, ಆಕ್ರೋಶಗಳನ್ನು ಬೇರೆಡೆಗೆ ಹರಿಸಿ ಸಿದ್ದರಾಮಯ್ಯ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಇದು ಸರಿಯಾದ ಸಂದರ್ಭ. ಬಿಜೆಪಿ ಸರ್ಕಾರವನ್ನು ಕರ್ನಾಟಕ ರಾಜ್ಯದಲ್ಲಿ ತರಲು ಇದೊಂದು ಸೂಕ್ತ ಸಂದರ್ಭವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್  ಶಾ ಹೇಳಿದ್ದಾರೆ.

ಉಡುಪಿಯಲ್ಲಿಂದು  ಸಾಮಾಜಿಕ ಮಾಧ್ಯಮ ಕಾರ್ಯಕರ್ತರ ಸಭೆಯಲ್ಲಿ  ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕರ್ನಾಟಕದ ಜನತೆಯ ಆಕ್ರೋಶ ಮುಗಿಲು ಮುಟ್ಟಿದೆ. ಅವರ ಈ ಆಕ್ರೋಶವನ್ನು ಮತಗಳನ್ನಾಗಿ ಪರಿವರ್ತಿಸಿ ಕಾಂಗ್ರೆಸ್ಸನ್ನು ಕಿತ್ತೆಸೆಯುವ ಕಾಲ ಸಮೀಪಿಸಿದೆ. ಬಿಜೆಪಿ ಚುನಾವಣೆಗಳ ಜೊತೆ ಜನರ ಮನಸ್ಸನ್ನು ಕೂಡ ಗೆಲ್ಲುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ನಂತೆ ನಾವು ಚುನಾವಣೆಯನ್ನು ಗೆಲ್ಲಲು ಅಡ್ಡದಾರಿ ಹಿಡಿಯುವುದಿಲ್ಲ, ನಾವು ಕಷ್ಟಪಟ್ಟು ಕೆಲಸ ಮಾಡುತ್ತೇವೆ. ಜನರನ್ನೆಲ್ಲಾ ಒಗ್ಗೂಡಿಸಿ ಏಕತೆಯ ಮಂತ್ರವನ್ನು ಜಪಿಸುತ್ತೇವೆ. ಬಿಜೆಪಿ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಿದೆ. ಇದರಿಂದಾಗಿ ಚುನಾವಣೆಯಿಂದ ಚುನಾವಣೆಗೆ ಬಿಜೆಪಿ ಗೆಲ್ಲುತ್ತಾ ಬಂದಿದೆ ಎಂದು ಹೇಳಿದರು.

ಬಿಜೆಪಿ  ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕರ್ನಾಟಕಕ್ಕೆ ಆ ಬಚ್ಚನಾದ ರಾಹುಲ್ ಗಾಂಧಿಯನ್ನು ಕರೆತಂದು ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ. ನಮಗೆ ಅನುಕೂಲವಾಯಿತು. ಬಿಜೆಪಿ 150 ಸೀಟುಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಅಮಿತ್ ಶಾ ಅವರು ಬಿ.ಎಸ್.ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
 
ಪರ್ಯಾಯ ಪಾಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ, ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದಕ್ಕೂ ಮುನ್ನ ಅಮಿತ್ ಶಾ ಪಾಲಿಮಾರು ಮಠದ ಹತ್ತಿರ ರಾಜಾಂಗನ ಪಾರ್ಕಿಂಗ್ ಪ್ರದೇಶದ ಹತ್ತಿರ ರಾಮದಾಮ ವಾಣಿಜ್ಯ ಮತ್ತು ವಸತಿ ಸಂಕೀರ್ಣವನ್ನು ಉದ್ಘಾಟಿಸಿದರು.
ಉಡುಪಿ ಮಠಕ್ಕೆ ಭೇಟಿ ನೀಡಿರುವುದು ಮನಸ್ಸಿಗೆ ತುಂಬಾ ಖುಷಿಯಾಗಿದೆ. ನಾನು ಕೃತಜ್ಞ ಎಂದು ಶಾ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video