ರಾಜಕೀಯ

ಹ್ಯಾರಿಸ್ ಮಗನ ಪುಂಡಾಟಕ್ಕೆ ಪಕ್ಷ ಹೇಗೆ ಹೊಣೆಯಾಗುತ್ತದೆ? ಪರಮೇಶ್ವರ್ ಪ್ರಶ್ನೆ

Shilpa D
ಬೆಂಗಳೂರು: ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಲ್ಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.
ಹ್ಯಾರಿಸ್ ಪುತ್ರನ ಪ್ರಕರಣದಿಂದ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ, ವಿಧಾನಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. 
ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪ್ರಕರಣಕ್ಕೆ ಪಕ್ಷವನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕೆಟ್ಟದ್ದಾಗಿ ಬಿಂಬಿಸುತ್ತಿದ್ದಾರೆ, ಅವರು ಕಾಂಗ್ರೆಸ್ ಸದಸ್ಯರಾಗಿದ್ದ ಮಾತ್ರಕ್ಕೆ ಪಕ್ಷ ಹೇಗೆ ಹೊಣೆಗಾರಿಕೆಯಾಗುತ್ತದೆ?  ಇದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ನಾವು ಹ್ಯಾರಿಸ್ ಅವರ ಪುತ್ರನನ್ನು ಹಾಗೂ ಬಿಬಿಎಂಪಿ ಕಚೇರಿಯಲ್ಲಿ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್ ಪುರಂ ಬ್ಲಾಕ್ ಕಾರ್ಯಕರ್ತ ಎಸ್. ನಾರಾಯಣಸ್ವಾಮಿ ಯನ್ನು ಪಕ್ಷದಿಂದ ಉಚ್ಛಾಟಿಸಿದ್ದೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಉದ್ಯಮಿ ಪುತ್ರ ವಿದ್ವತ್ ಮೇಲೆ ಶಾಸಕ ಎನ್‌.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಅವನ ಸಹಚರರು ಹಲ್ಲೆ ನಡೆಸಿದ ಪ್ರಕರಣದಲ್ಲಿ  ಹ್ಯಾರಿಸ್ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ  ವೀಕ್ಷಕರ ವರದಿ ನಂತರ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
SCROLL FOR NEXT