ಅಥಣಿ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಿತ್ರ 
ರಾಜಕೀಯ

ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ: ರಾಹುಲ್ ಗಾಂಧಿ

ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಳಗಾವಿ: ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಎರಡನೇ ಹಂತದ "ಜನಾಶೀರ್ವಾದ ಯಾತ್ರೆ" ಯ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರವರು ಇಂದು  ಅಥಣಿಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಕರ್ನಾಟಕಸರ್ಕಾರ ಸ್ಪಂದಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 1 ಸಾವಿರ ರೂಪಾಯಿ ಗೌರವ ಧನ ಹೆಚ್ಚಿಸಿದೆ. ಇದರಿಂದಾಗಿ1 ಕೋಟಿ 2 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ  ಅನುಕೂಲವಾಗಿದೆ ಎಂದು ತಿಳಿಸಿದರು.

ಬಸವಣ್ಣನವರು ಹೇಳಿದಂತೆ ಕಾಯಕವೇ ಕೈಲಾಸ, ಹಾಗೂ ಸಮಾನತೆ ತತ್ವದಂತೆ ಕರ್ನಾಟಕ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು,  ಕರ್ನಾಟಕ ಮಹಿಳೆಯರ ಅಭಿವೃದ್ದಿಯಲ್ಲಿ ಉಳಿದೆಲ್ಲಾ ರಾಜ್ಯಗಳಿಗಿಂತ ಮುಂದಿದೆ ಎಲ್ಲರಿಗೂ ಸಮಾನ ಅವಕಾಶ ಒದಗಿಸುವಲ್ಲಿ ನಾವು ಬದ್ಧರಾಗಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಕ್ಕಮಹಾದೇವಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ನಾವು ಪ್ರಾರಂಭಿಸಿದ್ದೇವು. ಬಿಜೆಪಿ ನಾಯಕರು ಮಾತನಾಡುತ್ತಾರೆ ವಿನಹ ಏನೂ ಮಾಡುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದರು.

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ  ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!