ಜನಾಶೀರ್ವಾದ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ 
ರಾಜಕೀಯ

ಬಸವಣ್ಣನವರ 'ನುಡಿದಂತೆ ನಡೆ' ತತ್ವ ಪಾಲಿಸದ ಮೋದಿ: ರಾಹುಲ್ ಗಾಂಧಿ ವ್ಯಂಗ್ಯ

21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ...

ಅಥಣಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 
21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ಅವರ ತತ್ವಗಳನ್ನು ಪಾಲಿಸುತ್ತಿಲ್ಲ, ನುಡಿದಂತೆ ನಡೆಯದೇ ಬಸವಣ್ಣನ ತತ್ವಾದರ್ಶಗಳನ್ನು ಉಲ್ಲಂಘಿಸುತ್ತಿದ್ದಾರೆ, ಬಸವಣ್ಣನವರ ಹೆಸರಿನಲ್ಲಿ ಜನರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ನಾವು ಕರ್ನಾಟಕದಲ್ಲಿ ಬಸವಣ್ಣನವರ ತತ್ವದಡಿ ಸರ್ವರ ಅಭಿವೃದ್ಧಿ ಮಾಡಿದ್ದೇವೆ.
"ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ" ಐದು ತತ್ವಗಳಡಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ,
ಬಸವಣ್ಣನವರ ವಚನ ಬಳಸುವ ಮೋದಿ, ನುಡಿದಂತೆ ನಡೆದಿಲ್ಲ. ನೀವು ಕೇವಲ ವೋಟಿಗಾಗಿ ಬಸವಣ್ಣನವರ ಹೆಸರು ಹೇಳುತ್ತಿದ್ದೀರಾ ಎಂದು ರಾಹುಲ್‌ ಪ್ರಶ್ನಿಸಿದರು.
ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, 15 ಲಕ್ಷ ಪ್ರತಿಯೊಬ್ಬರಿಗೆ ಕೊಡುತ್ತೇನೆ ಎಂದಿದ್ದರು. ಆದರೆ, ಕೊಡಲಿಲ್ಲ ಎಂದು ದೂರಿದರು.ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅಪರಾಧಗಳ ಸಂಖ್ಯೆಗಣನೀಯವಾಗಿ ಹೆಚ್ಚುತ್ತಿದೆ. ಅಮಿತ್ ಶಾ ಮತ್ತು ಮೋದಿ ಅದರ ಬಗ್ಗೆ ಗಮನ ಕೊಡದೇ ಕರ್ನಾಟಕದಲ್ಲಿನ ಸಣ್ಣ ವಿಷಯಗಳನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ದೂರಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT