ಅಮಿತ್ ಶಾ 
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಮಹದಾಯಿ ನೀರು: ಅಮಿತ್‌ ಶಾ

ಕೊನೆಗೂ ಮಹದಾಯಿ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ....

ಕಲಬುರಗಿ: ಕೊನೆಗೂ ಮಹದಾಯಿ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕದ ಜನತೆಗೆ ಮಹದಾಯಿ ನೀರು ಸಿಗಲಿದೆ ಎಂದು ಸೋಮವಾರ ಹೇಳಿದ್ದಾರೆ.
ಏಪ್ರಿಲ್ -ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ ಗೋವಾದೊಂದಿಗಿನ ಮಹದಾಯಿ ವಿವಾದವನ್ನು ಬಗೆಹರಿಸುತ್ತೇನೆ ಎಂದು ನಾನು ಕರ್ನಾಟಕ ಜನತೆಗೆ ಗ್ಯಾರಂಟಿ ಕೊಡುತ್ತೇನೆ ಎಂದಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸೇರಿದಂತೆ ಕರ್ನಾಟಕದ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಅಮಿತ್ ಶಾ, ಮಹದಾಯಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಸೂಕ್ತವಾಗಿ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಇದೇ ವೇಳೆ ಹಿಂದುತ್ವದ ಬಗ್ಗೆ ಬಿಜೆಪಿ ಕಾಂಟ್ರಾಕ್ಟ್ ಪಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ 'ನೋ ಕಮೆಂಟ್ಸ್' ಎಂದ ಅವರು, ಮಠ‌ ಮಾನ್ಯಗಳನ್ನು ಸಿದ್ದರಾಮಯ್ಯ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿ‌ ನಡೆಯುತ್ತಿದೆ. ಇದರ ಬಗ್ಗೆ ಸಿದ್ದರಾಮಯ್ಯ ಚಕಾರ ಎತ್ತುತ್ತಿಲ್ಲ, ಈ ಘಟನೆಗಳನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂದು ಗೊತ್ತಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ