ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ರಾಹುಲ್ ಗಾಂಧಿಯವರದ್ದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ತಂತ್ರ : ಬಿಜೆಪಿ ಆರೋಪ

ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿರುವ....

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Sumana Upadhyaya
Updated On : 26 Feb 2018, 8:32 am

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ಗೂಂಡಾರಾಜ್, ಅಕ್ರಮ ಆಡಳಿತ, ನೂರಾರು ರೈತರ ಆತ್ಮಹತ್ಯೆ, ದೇಶವಿರೋಧಿ ಕೃತ್ಯಗಳ ಮೂಲಕ ಮುಗ್ಧ ಯುವಕರನ್ನು ಬಲಿ ತೆಗೆದುಕೊಳ್ಳುವ ಕೂಪಕ್ಕೆ ತಳ್ಳಿದ್ದು ಇಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರು ಇಲ್ಲ. ಇದರ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೊತ್ತಾಗಬಹುದು ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ನಿರ್ಗಮನದ ಹಂತದಲ್ಲಿದೆ. ಹೀಗಾಗಿ ರಾಹುಲ್ ಗಾಂಧಿಯವರು ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಬೇರೆ ಬೇರೆ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದರು.

ದೇಶದಲ್ಲಿ 60 ವರ್ಷಗಳ ಕಾಂಗ್ರೆಸ್ ಆಡಳಿತ ಮತ್ತು 4 ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ಬಗ್ಗೆ  ಮುಕ್ತ ಚರ್ಚೆಗೆ ಬರುವಂತೆ ಮುರಳೀಧರ್ ರಾವ್ ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಸವಾಲು ಹಾಕಿದರು.

ಕರ್ನಾಟಕದಲ್ಲಿ ಗೂಂಡಾರಾಜ್ ಮನೋಭಾವ ಇರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ರಾಹುಲ್ ಗಾಂಧಿಯವರು ವಿಶ್ವಾಸಾರ್ಹ ಮತ್ತು ಮನಸ್ಸಿಗೊಪ್ಪುವ ವಿವರಣೆ ನೀಡಲಿ ಎಂದು ಕೂಡ ಸವಾಲು ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement