ಪ್ರಧಾನಿ ಮೋದಿ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ....
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಇಷ್ಟೊಂದು ಕೀಳುಮಟ್ಟದಲ್ಲಿ ಮಾತನಾಡುವ ಪ್ರಧಾನಿಯನ್ನು ನಾನು ಕಂಡಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇಂದು ಕೊಪ್ಪಳ ತಾಲ್ಲೂಕಿನ ಬಸಾಪುರದ ಎಂಎಸ್ಪಿಎಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಧಿಕಾರಕ್ಕೆ ಬರುವ ಮುಂಚೆ ಮೋದಿ ತಾನು ದೇಶದ ಚೌಕಿದಾರ ಎಂದು ಹೇಳುತ್ತಿದ್ದರು. ಲಲಿತ್ ಮೋದಿ, ನೀರವ್ ಮೋದಿ ದೇಶ ಬಿಟ್ಟು ಓಡಿ ಹೋಗುವಾಗ ಎಲ್ಲಿ ಹೋಗಿದ್ದರು ಈ ಚೌಕಿದಾರ ಎಂದು ವ್ಯಂಗ್ಯವಾಡಿದರು. ಅಲ್ಲದೆ ಪ್ರಧಾನಿ ಮೋದಿ ನೀಡಿದ ಕುಮ್ಮಕ್ಕಿನಿಂದಲೇ ಅವರು ದೇಶ ತೊರೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ 'ಸೀದಾ ರುಪಯ್ಯಾ' ಸರ್ಕಾರ ಎಂಬ ಪ್ರಧಾನಿ ಮೋದಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಚೆಕ್ ಮೂಲಕ ಹಣ ಪಡೆದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಇನ್ನೊಬ್ಬರ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
‘ನಾವು ಅಮಿತ್ ಶಾಗೆ ಲೆಕ್ಕ ಕೊಡಬೇಕಾಗಿಲ್ಲ. ಬಜೆಟ್ ಮಂಡಿಸಿ ರಾಜ್ಯದ ಜನರಿಗೆ ಲೆಕ್ಕ ಕೊಟ್ಟಿದ್ದೇವೆ’ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಅವರು ರೈತ ಬಂಧು ಬಿರುದು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿದ ಹಾಗೂ ಸಾಲ ಮನ್ನಾ ಮಾಡಲು ನೋಟು ಮುದ್ರಿಸುವ ಯಂತ್ರ ಇಟ್ಟಿಲ್ಲ ಎಂದು ಹೇಳುತ್ತಿದ್ದ ಯಡಿಯೂರಪ್ಪ ‘ರೈತ ಬಂಧು’ ಹೇಗೆ ಆಗುತ್ತಾರೆ? ಎಂದು ಪ್ರಶ್ನಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.