ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ಸ್ವಕ್ಷೇತ್ರದಲ್ಲೇ ಅಸಮಾಧಾನ ಎದುರಿಸುತ್ತಿರುವ 'ಕೈ' ಶಾಸಕರಿಗೆ ಟಿಕೆಟ್ ಇಲ್ಲ!

ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ಅಸಮಾಧಾನ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ಅಸಮಾಧಾನ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಲೇಬೇಕು ಎಂದು ಪಣ ತೊಟ್ಟಂತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ, ಈಗಾಗಲೇ ತನ್ನ ಚುನಾವಣಾ ಸಿದ್ದತೆ  ಆರಂಭಿಸಿದೆ. ಅದರಂತೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ತನ್ನ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಿದ್ದು, ಯಾವ ಕ್ಷೇತ್ರದಲ್ಲಿ ಹಾಲಿ ಶಾಸಕರು ಕಾರ್ಯಕರ್ತರಿಂದ ಅಸಮಾಧಾನ ಎದುರಿಸುತ್ತಿದ್ದಾರೆ ಎಂಬ ಪಟ್ಟಿಯನ್ನು ತಯಾರು  ಮಾಡಲು ಸೂಚನೆ ನೀಡಲಾಗಿದೆ. 
ಪಟ್ಟಿಯ ಅಧಾರದ ಮೇರೆಗೆ ಹಾಲಿ ಇರುವ ಶಾಸಕರ ಪೈಕಿ ಯಾರಿಗೆ ಟಿಕೆಟ್ ನೀಡಬೇಕು ಅಥವಾ ಇಲ್ಲ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. 
ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಈಗಾಗಲೇ ಪ್ರತೀಯೊಂದು ಕ್ಷೇತ್ರದಲ್ಲಿ ವೀಕ್ಷಕರ ಅಧ್ಯಯನ ಆರಂಭವಾಗಿದೆ. ಅಂತೆಯೇ ಅಭ್ಯರ್ಥಿಗಶ ಆಯ್ಕೆಗೂ ಕ್ರಮ  ಕೈಗೊಳ್ಳಲಾಗಿದೆ. ಜನವರಿ 20ರೊಳಗೆ ವೀಕ್ಷಕರು ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಅಂತೆಯೇ ಚುನಾವಣಾ ಪ್ರಚಾರ ಸಮಿತಿ ನೇಮಕ ಮಾಡಿ ಪ್ರಚಾರ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸಲಾಗುತ್ತದೆ. ಹಾಲಿ ಇರುವ  ಕ್ಷೇತ್ರಗಳು ಮಾತ್ರವಲ್ಲದೇ ಕಾಂಗ್ರೆಸ್ ಶಾಸಕರು ಸೋತಿರುವ ಕ್ಷೇತ್ರಗಳನ್ನೂ ಗಂಭೀರವಾಗಿ ಪರಿಗಣಿಸಿ ಚುನಾವಣಾ ಕಾರ್ಯ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಲಿದ್ದೇವೆ. ಆಂತರಿಕ ಭಿನ್ನಮತ ಇರುವುದು ಬಿಜೆಪಿ ಪಕ್ಷದಲ್ಲಿ. ಹೀಗಾಗಿಯೇ  ಅಮಿತ್ ಶಾ ಆಗಾಗ ಕರ್ನಾಟಕಕ್ಕೆ ದೌಡಾಯಿಸುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!