ಶಿವಮೊಗ್ಗ: ಬಿಜೆಪಿ ತನ್ನ ಮಿಷನ್ 150ಯನ್ನು ನೆನಪಿಸಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ,
ಸಾಗನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ರೂ.220 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಧಿಕಾರವಿಲ್ಲ. ಚುನಾವಣೆ ವೇಳೆ ಜನರಿಗೆ ನೀಡಲಾಗಿದ್ದ 165 ಭರವಸೆಗಳ ಪೈಕಿ ಕಾಂಗ್ರೆಸ್ ಈಗಾಗಲೇ 155 ಭರವಸೆಗಳನ್ನು ಈಡೇರಿಸಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಬಸವಣ್ಣ, ಕುವೆಂಪು, ಕನಕ ಹಾಗೂ ಸೂಫಿ ಸಂತರಿದ್ದ ನಾಡು ಕರ್ನಾಟಕ. ಇಲ್ಲಿ ಬಿಜೆಪಿಯವರ ಮಿಷನ್ 150 ಕೆಲಸಕ್ಕೆ ಬರುವುದಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕನಸು ಕನಸ್ಸಾಗಿಯೇ ಉಳಿಯಲಿದೆ. ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.