ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಡಿಕೇರಿ: ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ಯುನಿಟ್‍ಗೆ 7 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವ ರಾಜ್ಯ ಕರ್ನಾಟಕ ಮಾತ್ರಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಿನ್ನೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ಕ್ಷೀರಭಾಗ್ಯ, ಕೃಷಿಭಾಗ್ಯ, ವಿದ್ಯಾಸಿರಿ, ಮೈತ್ರಿ-ಮನಸ್ವಿನಿ, ಅನಿಲಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ ಎಂದು ಹೇಳಿದರು.
ತೆರಿಗೆ ಸಂಗ್ರಹದಲ್ಲಿ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ, ಖಜಾನೆ ಬರಿದಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ನಿರಾಧಾರ ಎಂದುಸಿದ್ದರಾಮಯ್ಯ ತಿಳಿಸಿದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಕುಶಾಲನಗರವನ್ನು ಕೇಂದ್ರವಾಗಿಸಿ, ಕಾವೇರಿ ತಾಲೂಕು ಹಾಗೂಪೊನ್ನಂಪೇಟೆ ತಾಲೂಕು ರಚನೆ ಕುರಿತು ಪರಿಶೀಲಿಸಲಾಗುವುದು, ಕೊಡಗು ಜಿಲ್ಲೆ ಅಭಿವೃದ್ಧಿಗೆ 200 ಕೋಟಿ ರೂಪಾಯಿ ನೀಡಲಾಗಿದೆ, ರಾಜ್ಯದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.