ಬಿಎಸ್ ಯಡಿಯೂರಪ್ಪ 
ರಾಜಕೀಯ

ನಾನು ಮತ್ತೆ ಸಿಎಂ ಆಗ್ತಿನಿ, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ರೆ ಅಷ್ಟೆ: ಪೊಲೀಸರಿಗೆ ಬಿಎಸ್ ವೈ ಎಚ್ಚರಿಕೆ

ವಿಧಾನಸಭೆ ಚುನಾವಣೆ ನಂತರ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ. ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್....

ತುಮಕೂರು: ವಿಧಾನಸಭೆ ಚುನಾವಣೆ ನಂತರ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ. ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 
ಇಂದು ಶಿರಾದಲ್ಲಿ ಪರಿವರ್ತನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ ಮಾಜಿ ಸಿಎಂ, ಇನ್ನು ಮೂರು ನಾಲ್ಕು ತಿಂಗಳಲ್ಲಿ ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ನಮ್ಮ ಪೊಲೀಸ್ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ. ಕೆಲವು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಮತ್ತು ಅನಗತ್ಯವಾಗಿ ರೌಡಿಗಳ ಪಟ್ಟಿಗೆ ಸೇರಿಸುತ್ತಿದ್ದಾರೆ. ಆದರೆ ಇದು ಸರಿಯಲ್ಲ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ನರೇಂದ್ರ ಮೋದಿ ಪ್ರಧಾನಿಯಾದಾಗ ಕೇವಲ 6 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಈಗ 19 ರಾಜ್ಯಗಳಲ್ಲಿದೆ. ದೇಶವ್ಯಾಪಿ ಮೋದಿ ಅವರು ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚಿದ್ದಾರೆ. ನೀವು(ಸಿದ್ದರಾಮಯ್ಯ) ಮಾತ್ರ ಬಿಜೆಪಿಯನ್ನು ಉಗ್ರಗಾಮಿ ಎಂದು ಟೀಕಿಸುತ್ತಿದ್ದೀರಿ ಎಂದರು.
ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ನಾಲ್ಕು ತಿಂಗಳು ಕಳೆದರೆ ರಾಜ್ಯದಲ್ಲೂ ಅಧಿಕಾರ ನಡೆಸಲಿದೆ. ಇಂತಹ ಪಕ್ಷವನ್ನು ‘ಉಗ್ರಗಾಮಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದು ಶೋಭೆ ತರುವಂತಹದ್ದಲ್ಲ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!