ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ ಹಾಗೂ ಆರ್'ಎಸ್ಎಸ್ ಸಂಘಟನೆಗಳನ್ನು ಉಗ್ರಗಾಮಿ ಸಂಘಟನೆಗಳು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂಕೆ ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಾಯಕರು ಶುಕ್ರವಾರ ದೂರು ಸಲ್ಲಿಸಿದ್ದಾರೆ,
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಟಿ.ಸುನೀಲ್ ಕುಮಾರ್ ಅವರನ್ನು ಭೇಟಿಯಾದ ಮಾಜಿ ಸಚಿವ, ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರ ವಿರುದ್ಧ ಎರಡು ಪುಟಗಳ ದೂರು ಸಲ್ಲಿಸಿದೆ.
ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಬಳಿ ಮನವಿ ಮಾಡಿದರೆ, ಕ್ರಮ ಕೈಗೊಳ್ಳುವುದು ಬಿಟ್ಟು ಸರ್ಕಾರ ನಮ್ಮ ವಿರುದ್ಧವೇ ಆರೋಪಗಳನ್ನು ಮಾಡುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಅವರು ಬಿಜೆಪಿಯನ್ನು ಉಗ್ರಗಾಮಿಗಳ ಸಂಘಟನೆಯೆಂದು ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ಬಿಜೆಪಿ ಹೇಳಿಕೊಂಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos