ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಒಬ್ಬ ಬೇಜವಾಬ್ದಾರಿ ಮನುಷ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ನಗರದಲ್ಲಿ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಜವಾಬ್ದಾರಿ ಇಲ್ಲದ ಮನುಷ್ಯ. ಆತನ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ಬಳಿಕ ಪ್ರಗತಿಪರ ಚಿಂತಕರು ಹಾಗೂ ಸಾಹಿತಿಗಳ ಕುರಿತು ಕೇಂದ್ರ ಸಚಿವರು ನೀಡಿರುವ ಹೇಳಿಕೆ ಕುರಿತು ಮಾಧ್ಯಮದವರು ಪ್ರಶ್ನೆ ಕೇಳಿದಾಗ ಕೂಡಲೇ ಸಿಡಿಮಿಡಿಗೊಂಡ ಸಿದ್ದರಾಮಯ್ಯ ಅವರು, ಆ ವ್ಯಕ್ತಿ ಬಗ್ಗೆ ಏನು ಹೇಳೋದು, ಹೆಗಡೆ ಒಬ್ಬ ಅತ್ಯಂತ ಬೇಜವಾಬ್ದಾರಿ ಮನುಷ್ಯ ಎಂದು ತಿಳಿಸಿದ್ದಾರೆ.