ದಿನೇಶ್ ಗುಂಡೂರಾವ್ 
ರಾಜಕೀಯ

ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ: ದಿನೇಶ್ ಗುಂಡೂರಾವ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರಚಾರ ...

ಹೈದರಾಬಾದ್: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರಚಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಪಿಟಿಐ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಹುಲ್ ಗಾಂಧಿ ಅವರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಲ್ಲದೆ ರಾಜ್ಯದ ಪ್ರಭಾವಿ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಹಾಗೂ ಇಂಧನ ಸಚಿವ ಡಿ ಕೆ ಶಿವಕುಮಾರ್ ಸಹ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದರು.
ರಾಹುಲ್ ಗಾಂಧಿ ರಾಜ್ಯದ ಜನರನ್ನು ಆಕರ್ಷಿಸುತ್ತಾರೆ ಎಂದು ನಾನು ಭಾವಿಸಿದ್ದು, ಅವರು ನಮಗಾಗಿ ಪ್ರಚಾರದ ನೇತೃತ್ವ ವಹಿಸಿಕೊಳ್ಳುತ್ತಾರೆ ಎಂದು ಗುಂಡೂರಾವ್ ತಿಳಿಸಿದರು. ಅಲ್ಲದೆ ತಮ್ಮ ಸ್ವಕ್ಷೇತ್ರಗಳಲ್ಲೇ ವಿರೋಧ ಎದುರಿಸುತ್ತಿರುವ ಕೆಲ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ಸುಳಿವು ನೀಡಿದರು.
ರಾಹುಲ್ ಗಾಂಧಿ ಅವರು ಫೆಬ್ರವರಿ 10ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದು, ಮತ್ತೆ ಮಾರ್ಚ್ ತಿಂಗಳ ರಾಜ್ಯ ಪ್ರವಾಸ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್