ಅಸಾದುದ್ದೀನ್ ಓವೈಸಿ 
ರಾಜಕೀಯ

ವಿಧಾನಸಭಾ ಚುನಾವಣೆ: ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧೆ, ಕಾಂಗ್ರೆಸ್ ಗೆ ತಳಮಳ

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಓಲೈಕೆಗೆ ಮುಂಡಾಗಿದ್ದು ಇದಕ್ಕಾಗಿ ಹಿಂದುಗಳ ಕುರಿತಂತೆ ತುಸು ಮೃದು ಧೋರಣೆ ತಾಳಿರುವುದನ್ನು........

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಓಲೈಕೆಗೆ ಮುಂಡಾಗಿದ್ದು ಇದಕ್ಕಾಗಿ ಹಿಂದುಗಳ ಕುರಿತಂತೆ ತುಸು ಮೃದು ಧೋರಣೆ ತಾಳಿರುವುದನ್ನು ನಾವು ಕಾಣ್ಬಹುದಾಗಿದೆ. ಈ ಮುಖೇನ ಹಿಂದುತ್ವದ ಅಜೆಂಡಾವನ್ನೇ ಬಳಸಿಕೊಂಡು ಮತಗಳಿಕೆಗೆ ಮುಂಡಾದ ಬಿಜೆಪಿ ಮತ್ತಿತರೆ ಪಕ್ಷಗಳಿಗೆ ಟಾಂಗ್ ನೀಡಲು ಅದು ನಿರ್ಧರಿಸಿದೆ. ಆದರೆ ಇದೆಲ್ಲದರ ನಡುವೆ ಅಸಾದುದ್ದೀನ್ ಓವೈಸಿಯ ಅಖಿಲ ಭಾರತ ಮಜ್ಲಿಸ್ ಇ ಇಥೇಹಾದುಲ್ ಮುಸಲ್ಮಿನ್ (ಎಐಎಂಐಎಂ) ಪಕ್ಷವು ಕಟ್ಟಾ ಮುಸ್ಲೀಂ ವಾದಿಗಳನ್ನು ತನ್ನತ್ತ ಸೆಳೆದುಕೊಳ್ಳುವುದಕ್ಕೆ ಹೊರಟಿರುವುದು ಕಾಂಗ್ರೆಸ್ ಗೆ ತಲೆನೋವಾಗುವ ಸಂಭವವಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಕಲಬುರ್ಗಿ, ಬಿದರ್, ರಾಯಚೂರು, ಕೊಪ್ಪಳ, ಯಾದರಿಗಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳ ಹೆಚ್ಚು ಮುಸ್ಲಿಂ ಪ್ರಾಬಲ್ಯವಿರುವ ಸುಮಾರು 60 ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ನಿರ್ಧರಿಸಿದೆ. "ನಾವು 25 ರಿಂದ 30 ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತೇವೆ, ನಾವು ಅವುಗಳಲ್ಲಿ ಹೆಚ್ಚಿನ ಪಾಲು ಗೆಲುವು ಸಾಧಿಸುತ್ತೇವೆ ಎನ್ನುವ ಭರವಸೆ ಇದೆ.  ಇದರಲ್ಲಿ ಬೆಂಗಳೂರು ನಗರದಲ್ಲಿರುವ ಶಿವಾಜಿನಗರ, ಪುಲಕೇಶಿ ನಗರ್ ಮತ್ತು ಚಾಮರಾಜಪೇಟೆ ಕ್ಷೇತ್ರಗಳು ಸೇರಿವೆ " ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನ್ ಘನಿ ಎಕ್ಸ್ ಪ್ರೆಸ್ ಗೆ ತಿಳಿಸಿದರು
"ಮುಸ್ಲಿಮರು ಕಾಂಗ್ರೆಸ್ ಗೆ ಮಾತ್ರ ಸೀಮಿತವಾಗಿಲ್ಲ . ಕಳೆದ 70 ವರ್ಷಗಳಿಂದ ಮುಸ್ಲಿಂ ಸಮುದಾಯವನ್ನುಕಾಂಗ್ರೆಸ್  ತನ್ನ ಮತ ಬ್ಯಾಂಕ್ ಎಂದು ಪರಿಗಣಿಸಿದೆ. ಆದರೆ ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ. ಕಾಂಗ್ರೆಸ್ ನಲ್ಲಿ ಯಾರೊಬ್ಬ ಮುಸ್ಲಿಂ ನಾಯಕರನ್ನೂ ಬೆಳೆಯಲು ಬಿಟ್ಟಿಲ್ಲ.. ಎಐಎಂಐಎಂ ಮುಸ್ಲಿಮರ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ" ಘನಿ ಹೇಳಿದ್ದಾರೆ.
ಬೆಂಗಳೂರು ನಗರ, ಕಲಬುರ್ಗಿ, ವಿಜಯಪುರ, ರಾಯಚೂರು, ಕೊಪ್ಪಳ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಎಐಎಂಐಎಂ  ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪಕ್ಷದ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಸಂಬಂಧ ವಿಜಯಪುರದಲ್ಲಿ ಜ.21ರಂದು ಮೊದಲ ರ್ಯಾಲಿ ಆಯೋಜನೆಗೊಂಡಿದೆ.
ಆದರೆ ಈ ರ್ಯಾಲಿ ನಡೆಸುವುದರಿಂದ ಜಿಲ್ಲೆಯ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ, ಈ ರ್ಯಾಲಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಆದರೆ ರ್ಯಾಲಿಗೆ ಅನುಮತಿ ನಿರಾಕರಣೆ ಕುರಿತಂತೆ ಪಕ್ಷವು ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಎಐಎಂಐಎಂ ರಾಜ್ಯಾಧ್ಯಕ್ಷ ಘನಿ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ನೇರ ಹಣಾಹಣಿ ನಿರೀಕ್ಷಿಸಿದ್ದ ಮತದಾರರು ಮುಸ್ಲಿಂ ಮತಗಳು ಕಾಂಗ್ರೆಸ್ ಪಾಲು ಎಂದೇ ಭಾವಿಸಿದ್ದರು. ಆದರೆ ಈಗಿನ ವರ್ತಮಾನದಂತೆ ಎಐಎಂಐಎಂ ಸ್ಪರ್ಧೆ ಮಾಡಿದ್ದಾದರೆ ಮುಸ್ಲಿಮರ ಮತಗಳು ವಿಭಜನೆಯಾಗುವುದು ಖಂಡಿತ. ಆಗ ಕಾಂಗ್ರೆಸ್ ಗೆ ನಷ್ಟವಾಗುವುದು ಖಚಿತವಾಗಿದ್ದು ಇದರಿಂದ ಲಾಭ ಪಡೆಯುವವರು ಯಾರೆಂದು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ