ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮೈಸೂರು: ನಿಮ್ಮಿಂದ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ- ಸಿಎಂಗೆ ಅಮಿತ್ ಶಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡರೂ ಬಿಜೆಪಿ ಪರಿವರ್ತನಾ ಯಾತ್ರೆ ತಡೆಯಲು...

ಅಮಿತ್ ಶಾ
Lingaraj Badiger
Updated On : 25 Jan 2018, 6:32 am
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡರೂ ಬಿಜೆಪಿ ಪರಿವರ್ತನಾ ಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಆಡಳಿತಯಂತ್ರ ದುರುಪಯೋಗ ಮಾಡಿಕೊಂಡು ಬಿಜೆಪಿ ಯಾತ್ರೆಗೆ ಬರುವ ಜನರನ್ನು ತಡೆಯಲು ಯತ್ನಿಸಿದರು ಎಂದು ಆರೋಪಿಸಿದ್ದಾರೆ. ಅಲ್ಲದೆ ಫೆಬ್ರವರಿ 4ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೂ ಅಡ್ಡಿಪಡಿಸಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ದೂರಿದ್ದಾರೆ.
ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪುರಾಣ ಹೇಳಲು ಹೋದರೆ ಏಳು ದಿನಗಳು ಸಾಲುವುದಿಲ್ಲ ಎಂದು ವಾಗ್ಧಾಳಿ ನಡೆಸಿದ ಅಮಿತ್‌ ಶಾ, ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ಸಮಾಜವಾದಿ ಎನ್ನುವ ಅವರು 70 ಲಕ್ಷ ರುಪಾಯಿಯ ವಾಚ್‌ ಕಟ್ಟುತ್ತಾರೆ. ನಿಮ್ಮಲ್ಲಿ ಯಾರ ಬಳಿಯಾದರೂ 70 ಲಕ್ಷದ ವಾಚ್‌ ಇದೆಯೇ ಎಂದು ಪ್ರಶ್ನಿಸಿದರು. 

Advertisement

Advertisement

ಸಿದ್ದರಾಮಯ್ಯ ಅವರ ಕುತಂತ್ರದಿಂದಾಗಿ ರಾಜ್ಯದಲ್ಲಿ ಬಂದ್‌ ನಡೆದಿದೆ. ಇದರ ಹೊರತಾಗಿಯೂ ಬಿಜೆಪಿ ರ್ಯಾಲಿಗೆ ಬಂದಿರುವ ನಿಮಗೆಲ್ಲಾ ನನ್ನ ಅಭಿನಂದನೆಗಳು ಎಂದರು. 
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಹ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಪರಿವರ್ತನಾ ಯಾತ್ರೆ ವಿಫಲಗೊಳಿಸಲು ರಾಜ್ಯ ಸರ್ಕಾರ ಕರ್ನಾಟಕ ಬಂದ್ ಮಾಡಿದೆ. ಬಿಜೆಪಿ ಯಾತ್ರೆಗೆ ಬರುವ ಜನರನ್ನು ತಡೆಯುವುದಕ್ಕಾಗಿ ಪೊಲೀಸರನ್ನು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸಿಕೊಂಡ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement