ಎಬಿ ಮಾಲಕರೆಡ್ಡಿ 
ರಾಜಕೀಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ಎಬಿ ಮಾಲಕರೆಡ್ಡಿ

ಕಾಂಗ್ರೆಸ್‌ನ ಹಿರಿಯ ಶಾಸಕ ಡಾ.ಎಬಿ ಮಾಲಕರೆಡ್ಡಿ ಅವರು ಶನಿವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂದಿನ ವಿಧಾನಸಭೆ....

ಯಾದಗಿರಿ: ಕಾಂಗ್ರೆಸ್‌ನ ಹಿರಿಯ ಶಾಸಕ ಡಾ.ಎಬಿ ಮಾಲಕರೆಡ್ಡಿ ಅವರು ಶನಿವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. 
ಇಂದು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಲಕರೆಡ್ಡಿ ಅವರು, ಮುಂದಿನ ಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಕುಟುಂಬದ ಯಾರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಗಟ್ಟಿಯಾದ ನಿರ್ಧಾರ. ಹೈಕಮಾಂಡ್ ಹೇಳಿದರೂ ಮುಂದಿನ‌ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಯಸ್ಸಾದ ಮೇಲೆ ನಿವೃತ್ತಿ ಹೊಂದಿ ಯುವಕರಿಗೆ ಆದ್ಯತೆ ಕೊಟ್ಟರೆ ಅವರಿಗೂ ಅನುಕೂಲವಾಗಲಿದೆ. ರಾಜಕಾರಣಿಗಳು ತಮ್ಮ ವಯಸ್ಸು 80 ದಾಟಿದ ಮೇಲೆ ನಿವೃತ್ತಿ ಪಡೆದರೆ ಯುವಕರಿಗೆ ಅವಕಾಶ ಸಿಗುತ್ತದೆ ಎಂದರು.
ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ಮುಖಂಡರು ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಸದ್ಯ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 
ಇದೇ ವೇಳೆ ತಾವು ಬಿಜೆಪಿ ಅಥವಾ ಇನ್ನಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಹಿರಿಯ ಕಾಂಗ್ರೆಸ್ ನಾಯಕ, ಬಿಜೆಪಿ ಸೇರುವ ಸುದ್ದಿ ಕೇವಲ ವದಂತಿ ಅಷ್ಟೆ ಎಂದರು.
ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಜಕೀಯ ನಡೆಯಿಂದ ಬೇಸರಗೊಂಡು ಶಾಸಕ ಮಾಲಕರೆಡ್ಡಿ ಅವರು ಚುನಾವಣೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಮಾಲಕರೆಡ್ಡಿ ಅವರಿಗೆ ಪಕ್ಷದ ನಾಯಕರು ಯಾವ ರೀತಿ ಮನವೊಲಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!