ಸಾಂದರ್ಭಿಕ ಚಿತ್ರ 
ರಾಜಕೀಯ

ಕಾಂಗ್ರೆಸ್ ನಿಂದ 'ನನ್ನ ಕ್ಷೇತ್ರ-ನನ್ನ ಹೊಣೆ' ಅಭಿಯಾನ ಆರಂಭ

ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಜಾಲವನ್ನು ಬಲಪಡಿಸಲು ...

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಜಾಲವನ್ನು ಬಲಪಡಿಸಲು ಉದ್ದೇಶಿಸಿರುವ ಕಾಂಗ್ರೆಸ್ ನನ್ನ ಕ್ಷೇತ್ರ, ನನ್ನ ಹೊಣೆ ಅಭಿಯಾನವನ್ನು ಪ್ರಾರಂಭಿಸಿದ್ದು, ಬೂತ್ ಮಟ್ಟದಿಂದ ಪಕ್ಷ ಉತ್ತಮ ಸಾಧನೆ ಮಾಡಲು ಕಾಂಗ್ರೆಸ್ ನಾಯಕರು ಜವಾಬ್ದಾರಿ ತೆಗೆದುಕೊಳ್ಳುವುದು ಅಜೆಂಡಾ ಆಗಿದೆ.
ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ಚುನಾವಣಾ ಕಾರ್ಯತಂತ್ರ ಮತ್ತು ಫೆಬ್ರವರಿ 10ರಿಂದ 12ರವರೆಗೆ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಮುನ್ನ ಮಾಡಬೇಕಾದ ತಯಾರಿ ಕುರಿತು ಚರ್ಚೆ ನಡೆಸಲಾಯಿತು.
ಹೊಸ ಅಭಿಯಾನದ ಅಂಗವಾಗಿ ಪಕ್ಷದ ಕೆಲಸಗಳು ಮತ್ತು ಸಾಧನೆಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ನಾಯಕರುಗಳಿಗೆ ವಹಿಸುವ ಕುರಿತು ತೀರ್ಮಾನಿಸಲಾಯಿತು.ತಳ ಮಟ್ಟದಿಂದ ಕಾಂಗ್ರೆಸ್ ನಾಯಕರು ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಕೆಲಸ ಮಾಡುವುದಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪಕ್ಷದ ನಾಯಕರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಭಿಯಾನ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಂಬರುವ ಚುನಾವಣೆಯನ್ನು ಒಟ್ಟಾಗಿ ಎದುರಿಸಿ ಬಿಜೆಪಿಯ ವೈಫಲ್ಯವನ್ನು ಜನರ ಮುಂದೆ ತೋರಿಸುವುದಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!